ಮಂಗಳೂರು: ಬಾರ್ನಲ್ಲಿ ಜಗಳವಾಡಿ ಇಬ್ಬರಿಗೆ ಚೂರಿಯಿಂದ ಇರಿದ ಘಟನೆ ಸುರತ್ಕಲ್ನಲ್ಲಿ ಗುರುವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಸುರತ್ಕಲ್ನ ನಿಜಾಮ್ಗೆ ಹೊಟ್ಟೆಯ ಭಾಗದಲ್ಲಿ ಗಂಭೀರವಾಗಿ ಗಾಯವಾಗಿದ್ದು ಮುಕ್ಷಿದ್ ಕೈಗೆ ಸಣ್ಣಪಟ್ಟ ಗಾಯಗಳಾಗಿವೆ. ಇಬ್ಬರೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ರಾತ್ರಿ ಸುಮಾರು 11 ಗಂಟೆಯ ವೇಳೆ ಮುಕ್ಷಿದ್ ಮತ್ತು ನಿಜಾಮ್ ಸುರತ್ಕಲ್ನ ದೀಪಕ್ ಬಾರ್ನಲ್ಲಿ ಮದ್ಯ ಸೇವಿಸುತ್ತಿದ್ದಾಗ ರೌಡಿಶೀಟರ್ ಮತ್ತು ಬಜರಂಗದಳ ಕಾರ್ಯಕರ್ತ ಗುರುರಾಜ್, ಆತನ ಗೆಳೆಯರಾದ ಅಲೆಕ್ಸ್ ಸಂತೋಷ್, ಸುಶಾಂತ್ ಮತ್ತು ನಿತಿನ್ ಅಲ್ಲಿಗೆ ಬಂದಿದ್ದಾರೆ. ಸ್ವಲ್ಪ ಹೊತ್ತಿನಲ್ಲಿ ಎರಡೂ ಕಡೆಯುವರು ಜಗಳ ಆರಂಭಿಸಿದ್ದಾರೆ.

ಬಾರ್ನಿಂದ ಹೊರಗೆ ಬಂದ ನಂತರವೂ ಜಗಳ ಮುಂದುವರಿದಿದ್ದು ಈ ಸಂದರ್ಭದಲ್ಲಿ ಆರೋಪಿಗಳ ಪೈಕಿ ಒಬ್ಬ ನಿಜಾಮ್ನ ಹೊಟ್ಟೆಯ ಭಾಗಕ್ಕೆ ಚೂರಿಯಿಂದ ಇರಿದಿದ್ದಾನೆ. ಪಕ್ಕದಲ್ಲೇ ಇದ್ದ ಮುಕ್ಷಿದ್ ಕೈಗೂ ಇರಿತವಾಗಿದೆ ಎಂದು ಕಮಿಷನರ್ ತಿಳಿಸಿದ್ದಾರೆ.

ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಬಂಧನಕ್ಕೆ ರಾತ್ರಿಯೇ ತಂಡವನ್ನು ರಚಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.