ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು| ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ: ಬಾಲಕರಿಬ್ಬರ ಸಾವು

Published 28 ಜೂನ್ 2023, 19:55 IST
Last Updated 28 ಜೂನ್ 2023, 19:55 IST
ಅಕ್ಷರ ಗಾತ್ರ

ಮಂಗಳೂರು: ನಗರದ ಮೇರಿಹಿಲ್ ವಿಕಾಸ್ ಕಾಲೇಜಿನ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ.

ಮೃತರನ್ನು ಸ್ಥಳೀಯ ನಿವಾಸಿಗಳಾದ ಪವನ್ ( 16) ಹಾಗೂ ಚಿರಾಗ್ ( 15) ಎಂದು ಗುರುತಿಸಲಾಗಿದೆ.

ಅಪಘಾತದಿಂದ ಒಬ್ಬ ಬಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ. ಗಾಯಗೊಂಡ ಇನ್ನೊಬ್ಬ ಬಾಲಕನನ್ನು ರಾಜಲಕ್ಷ್ಮೀ ಬಸ್ಸಿನಲ್ಲಿ ತಕ್ಷಣವೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆ ತಲುಪುವಷ್ಟರಲ್ಲಿ ಆತನೂ ಮೃತಪಟ್ಟಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ

ಅಪಘಾತಕ್ಕೀಡಾದ ವಾಹನವು ಬೋಂದೆಲ್ ಪದವಿನಂಗಡಿಯ ಕುಶಾಲ್ ಕುಮಾರ್ ಅವರ ಹೆಸರಿನಲ್ಲಿದೆ ಎಂದು ಗೊತ್ತಾಗಿದೆ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT