ಮಂಗಳವಾರ, ಫೆಬ್ರವರಿ 18, 2020
17 °C
ಹೊಟೆಲ್‌ನಲ್ಲಿ ಬಾಂಬ್ ತಯಾರಿ

ಬಂಧನ ಸಾಧ್ಯತೆ ಖಚಿತವಾಗುತ್ತಿದ್ದಂತೆಯೇ ಬೆಂಗಳೂರಿಗೆ ಪರಾರಿಯಾದ ಆದಿತ್ಯ ರಾವ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನಗರದ ಬಜ್ಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆದಿತ್ಯ ರಾವ್, ಮಾರುವೇಷದಲ್ಲಿ ಮಂಗಳೂರಿನಿಂದ ಲಾರಿಯಲ್ಲಿ ಬೆಂಗಳೂರಿಗೆ ತೆರಳಿದ್ದ ಎಂದು ತಿಳಿದು ಬಂದಿದೆ‌.

ನಗರದ ಚಿಲಿಂಬಿಯಲ್ಲಿ ವಾಸಿಸುತ್ತಿದ್ದ ಆದಿತ್ಯ ರಾವ್, ಕೆಲ ದಿನಗಳ ಹಿಂದೆ ಹೋಟೆಲ್ ನಲ್ಲಿ ಬಿಲ್ಲಿಂಗ್ ವಿಭಾಗದಲ್ಲಿ ಕೆಲಸಕ್ಕೆ ಸೇರಿದ್ದ. ಹೋಟೆಲ್‌ನಲ್ಲಿಯೇ ಬಾಂಬ್ ತಯಾರಿಸಿದ್ದ ಎಂಬ ಮಾಹಿತಿ ಪೊಲೀಸರಿಗೆ ದೊರೆತಿದೆ.

ಹೋಟೆಲ್ ಸಿಬ್ಬಂದಿಯನ್ನು ವಿಚಾರಿಸಿದಾಗ ಈ ಎಲ್ಲ ಮಾಹಿತಿ ಬಹಿರಂಗವಾಗಿವೆ. ಆನ್‌ಲೈನ್ ಮೂಲಕ ಪೌಡರ್ ತರಿಸಿದ್ದು, ಅದರಿಂದ ಬಾಂಬ್ ತಯಾರಿಸಿದ್ದ. ಹೋಟೆಲ್‌ನ ರೂಮ್‌ನಲ್ಲಿ ಬಾಂಬ್ ತಯಾರಿಕೆಗೆ ಬಳಸಿದ್ದ ಪೌಡರ್ ಪತ್ತೆಯಾಗಿದೆ.

ವಿಚಿತ್ರವಾಗಿ ವರ್ತಿಸುತ್ತಿದ್ದ ಆದಿತ್ಯ ರಾವ್, ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ. ತನ್ನಷ್ಟಕ್ಕೆ ಇರುತ್ತಿದ್ದ ಎಂದು ಹೋಟೆಲ್ ಸಿಬ್ಬಂದಿ ತಿಳಿಸಿದ್ದಾರೆ.

ಇದನ್ನೂ ಓದಿ: ಪೊಲೀಸರಿಗೆ ಶರಣಾದ ಆದಿತ್ಯ ರಾವ್: ಅಜ್ಞಾತ ಸ್ಥಳದಲ್ಲಿ ವಿಚಾರಣೆ

ಬಾಂಬ್ ಪ್ರಕರಣದ ಕುರಿತಂತೆ ಸಿಸಿಟಿವಿ ದೃಶ್ಯಾವಳಿ‌ ಹಾಗೂ ಶಂಕಿತನ ಫೋಟೊ ಬಿಡುಗಡೆ ಮಾಡಿದ್ದ ಪೊಲೀಸರು, ಆರೋಪಿಗಾಗಿ ತೀವ್ರ ಶೋಧ ನಡೆಸಿದ್ದರು. ಎಲ್ಲ ಆಯಾಮಗಳಿಂದ ತನಿಖೆ ನಡೆಸಿದಾಗ, ಆದಿತ್ಯ‌ರಾವ್ ಈ ಕೃತ್ಯ ಎಸಗಿರಬಹುದು ಎಂದು ಅಂದಾಜಿಸಲಾಗಿತ್ತು.

ತನ್ನ ಬಂಧನ ಬಹುತೇಕ ಖಚಿತ ಎನ್ನುವ ಪರಿಸ್ಥಿತಿ ಸೃಷ್ಟಿಯಾದ ನಂತರ ಬೆಂಗಳೂರಿಗೆ ಪರಾರಿಯಾಗಿದ್ದ.

 

 

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು