ಬುಧವಾರ, ಫೆಬ್ರವರಿ 19, 2020
17 °C

ಮಂಗಳೂರು ಬಾಂಬ್ ಪ್ರಕರಣವನ್ನು ತನಿಖೆಗೆ ಒಳಪಡಿಸಿ: ಯು.ಟಿ. ಖಾದರ್‌ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಬಜ್ಪೆ ವಿಮಾನ ನಿಲ್ದಾಣದ ಬಾಂಬ್ ಪ್ರಕರಣವನ್ನು ಸಮಗ್ರ ತನಿಖೆಗೆ ಒಳಪಡಿಸಬೇಕು ಎಂದು ಶಾಸಕ ಯು.ಟಿ. ಖಾದರ್‌ ಒತ್ತಾಯಿಸಿದ್ದಾರೆ. 

ಮಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ವ್ಯಕ್ತಿಯನ್ನು ಬಂಧನ ಮಾಡಿದ್ದು, ಈ ವ್ಯಕ್ತಿ ಬಾಂಬ್ ಇಟ್ಟು ಮಂಗಳೂರಿನಿಂದ ಬೆಂಗಳೂರಿಗೆ ಹೋಗಿ ತಲುಪಿದ್ದಾನೆ. ಪೊಲೀಸ್ ಇಲಾಖೆಯವರು ಅಲ್ಲಿಯವರೆಗೂ ಏನು ಮಾಡುತ್ತಿದ್ದರು ಎಂದು ಅವರು ಪ್ರಶ್ನಿಸಿದರು.

ಸಮುದಾಯಗಳ ನಡುವೆ ಕಂದಕ ಸೃಷ್ಟಿ ಉಂಟುಮಾಡುವ ಇಂತಹ ಘಟನೆಗಳನ್ನು ಸರಕಾರ ಕೂಡಲೇ ಮಟ್ಟಹಾಕಬೇಕು. ಈ ಕೃತ್ಯದಲ್ಲಿ ಕಾಣದ ಕೈಗಳಿವೆ ಅವರನ್ನು ಕೂಡಲೇ ಬಂಧನ ಮಾಡಬೇಕು ಎಂದು ಖಾದರ್ ಅವರು ಒತ್ತಾಯಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು