ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ನರೇಂದ್ರ ಮೋದಿ ಭೇಟಿ ದಿನ ಮಂಗಳೂರು ಶಾಲಾ–ಕಾಲೇಜುಗಳಿಗೆ ರಜೆ

Last Updated 30 ಆಗಸ್ಟ್ 2022, 12:51 IST
ಅಕ್ಷರ ಗಾತ್ರ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರಿಗೆ ಭೇಟಿ ನೀಡಲಿರುವ ಸೆಪ್ಟೆಂಬರ್‌ 2ರಂದು, ಗಣೇಶೋತ್ಸವ ಕಾರಣಕ್ಕಾಗಿ ಮಂಗಳೂರು ನಗರ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

‘ಅಂದು ನಗರದ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಗಣಪತಿ ವಿಗ್ರಹಗಳ ವಿಸರ್ಜನೆಯ ಶೋಭಾಯಾತ್ರೆ ಕಾರ್ಯಕ್ರಮಗಳು ನಡೆಯುತ್ತವೆ. ಈ ಸಮಯದಲ್ಲಿ ಹೆಚ್ಚಿನ ಜನ–ವಾಹನದಟ್ಟಣೆ ಆಗುವ ಸಂಭವವಿದೆ ಎಂದು ಪೊಲೀಸ್‌ ಇಲಾಖೆಯ ಮಾಹಿತಿಯಂತೆ ರಜೆ ಘೋಷಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶದಲ್ಲಿ ಹೇಳಿದ್ದಾರೆ.

‘ಶಾಲಾ ಮಕ್ಕಳ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆ ಇರುವುದರಿಂದ, ಶಾಲಾ ಮಕ್ಕಳ ಸುರಕ್ಷತೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ ಸೇರಿದಂತೆ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಪ್ರಸ್ತುತ ನೀಡಿರುವ ರಜೆಯ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಬೇಕು’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT