ಸೋಮವಾರ, ಮೇ 17, 2021
21 °C

ರಾತ್ರಿ‌ ಕರ್ಫ್ಯೂ: 78 ವಾಹನ ಮಾಲೀಕರ‌ ವಿರುದ್ಧ‌ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DH File

ಮಂಗಳೂರು: ರಾತ್ರಿ‌ ಕರ್ಫ್ಯೂ ಉಲ್ಲಂಘನೆ ಮಾಡಿದ್ದಕ್ಕಾಗಿ ಶನಿವಾರ 65 ಹಾಗೂ ಭಾನುವಾರ 13 ವಾಹನ ಮಾಲೀಕರ ಮೇಲೆ ಮಂಗಳೂರಿನಲ್ಲಿ ಪ್ರಕರಣ ದಾಖಲಾಗಿವೆ.

ಎರಡು ದಿನಗಳಲ್ಲಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 78 ವಾಹನ ಮಾಲೀಕರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ನಗರ‌ ಪೊಲೀಸ್‌ ಕಮಿಷನರ್ ಶಶಿಕುಮಾರ್‌, ನಗರದಲ್ಲಿ ಜನರು ಕರ್ಫ್ಯೂಗೆ ಉತ್ತಮ ಸಹಕಾರ ನೀಡುತ್ತಿದ್ದಾರೆ. ಆದರೆ 10 ಗಂಟೆಗೆ ಅಂಗಡಿ, ಹೋಟೆಲ್‌ಗಳನ್ನು ಬಂದ್‌ ಮಾಡಿದರೆ, ಹೊಟೇಲ್‌ ಮಾಲೀಕರು, ಸಿಬ್ಬಂದಿ, ಅಂಗಡಿ ಮಾಲೀಕರು, ಸಿಬ್ಬಂದಿ ಮನೆಗೆ ತೆರಳುವಾಗ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ. ಆದ್ದರಿಂದ 10 ಗಂಟೆಗೆ ಮೊದಲೇ ಮನೆಗೆ ತಲುಪುವಂತೆ ನೋಡಿಕೊಂಡು ಹೊಟೇಲ್, ಅಂಗಡಿಗಳನ್ನು ಮುಚ್ಚಬೇಕು ಎಂದು ತಿಳಿಸಿದ್ದಾರೆ.

ಹಾಗೆಯೇ ಪಾಲಿಕೆ ವ್ಯಾಪ್ತಿಯಲ್ಲಿ 49 ಹಾಗೂ ಹೊರಗಡೆ 4 ಸೇರಿ ಒಟ್ಟು 54 ಚೆಕ್‌ಪೋಸ್ಟ್‌ಗಳನ್ನು ಹಾಕಲಾಗಿದೆ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು