ಬುಧವಾರ, ನವೆಂಬರ್ 13, 2019
23 °C

ಮಂಗಳೂರು | ಕೊಕೇನ್ ವಶ: ಮೂವರ ಬಂಧನ

Published:
Updated:

ಮಂಗಳೂರು: ನಗರದಲ್ಲಿ ಮಾದಕವಸ್ತು ಮಾರಾಟ ಜಾಲವೊಂದನ್ನು ಪತ್ತೆ ಮಾಡಿರುವ ನಗರ ಅಪರಾಧ ಘಟಕ (ಸಿಸಿಬಿ) ಹಾಗೂ ಆರ್ಥಿಕ ಅಪರಾಧ ಮತ್ತು ಮಾದಕವಸ್ತು ನಿಯಂತ್ರಣ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 30 ಗ್ರಾಂ. ಕೊಕೇನ್ ವಶಪಡಿಸಿಕೊಂಡಿದ್ದಾರೆ.  

ನಗರದ ಫಳ್ನೀರ್ ನಿವಾಸಿಗಳಾದ ಫಾಸಿಮ್ ನೌಷೀಬ್ (25), ಮಹಮ್ಮದ್ ಝಾಹಿದ್ (26) ಮತ್ತು ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪದ ಕುಂಜೆತ್ತೂರು ನಿವಾಸಿ ಅಫ್ಜಲ್ ಹುಸೇನ್ (28)  ಬಂಧಿತ ಆರೋಪಿಗಳು.

‘ಕಂಕನಾಡಿ ಜಂಕ್ಷನ್ ರೈಲ್ವೆ ಸಿಬ್ಬಂದಿ ವಸತಿಗೃಹಗಳ ಸಮೀಪ ಸೋಮವಾರ ಕೊಕೇನ್ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಡಾ.ಪಿ.ಎಸ್.ಹರ್ಷ ತಿಳಿಸಿದ್ದಾರೆ.

ಆರೋಪಿಗಳಿಂದ ₹ 2.40 ಲಕ್ಷ ಮೌಲ್ಯದ ಕೊಕೇನ್ ವಶಪಡಿಸಿಕೊಳ್ಳಲಾಗಿದೆ. ಕೃತ್ಯಕ್ಕೆ ಬಳಸಿದ ಸ್ವಿಫ್ಟ್ ಕಾರು ಮತ್ತು ನಾಲ್ಕು ಮೊಬೈಲ್ ಫೋನ್‌ಗಳನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಪ್ರತಿಕ್ರಿಯಿಸಿ (+)