ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಕದ್ರಿ ದೇವಸ್ಥಾನವೇ ಅರಾಫತ್ ಅಲಿ ಗುರಿ!

Published 15 ಸೆಪ್ಟೆಂಬರ್ 2023, 14:19 IST
Last Updated 15 ಸೆಪ್ಟೆಂಬರ್ 2023, 14:19 IST
ಅಕ್ಷರ ಗಾತ್ರ

ಮಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಪ್ರಮುಖ ಆರೋಪಿ ಶಿವಮೊಗ್ಗದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗುರುವಾರ ಬಂಧಿಸಿದ ಬೆನ್ನಲ್ಲೇ ಸ್ಫೋಟದ ಸಂಚು ಬಹಿರಂಗಗೊಂಡಿದೆ.

ಆರೋಪಿಗಳು ಕದ್ರಿ ಮಂಜುನಾಥ ದೇವಾಲಯವನ್ನೇ ಗುರಿಯಾಗಿ ದಾಳಿ ನಡೆಸಲು ಸಿದ್ಧತೆ ನಡೆಸಿದ್ದರು ಎಂಬುದನ್ನು ಎನ್‌ಐಎ ದೃಢಪಡಿಸಿದೆ.

ವಿದೇಶದಲ್ಲಿದ್ದುಕೊಂಡೇ ಇಲ್ಲಿನ ಚಟುವಟಕೆಗಳನ್ನು ನಿಯಂತ್ರಿಸುತ್ತಿದ್ದ ಅರಾಫತ್ ಅಲಿ, ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್, ಮಂಗಳೂರಿನ ಕುಕ್ಕರ್ ಸ್ಫೋಟ ಹಾಗೂ ಗೋಡೆ ಬರಹದ ಮೂಲ ರೂವಾರಿಯಾಗಿದ್ದ ಎಂಬ ಮಾಹಿತಿ ಎನ್‌ಐಎ ಗುರುವಾರ ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಲಭಿಸಿದೆ.

ಅರಾಫತ್‌ ಅಲಿಯಿಂದ ಪ್ರಚೋದನೆಗೆ ಒಳಗಾಗಿದ್ದ ಶಾರಿಕ್ ಕುಕ್ಕರ್ ಬಾಂಬ್ ಸ್ಫೋಟಿಸಲು ಸಿದ್ಧತೆ ನಡೆಸಿದ್ದ. ಇದಕ್ಕೂ ಮೊದಲು ನಗರದಲ್ಲಿ ಉಗ್ರರ ಕೃತ್ಯಕ್ಕೆ ಸಂಬಂಧಿಸಿದ ಗೋಡೆ ಬರಹ ಪ್ರಕರಣ ದಾಖಲಾಗಿತ್ತು. ಆರೋಪಿಗಳಾದ ಮಾಝ್ ಮುನೀರ್ ಮತ್ತು ಯಾಸೀನ್‌ ಈ ಕೃತ್ಯದಲ್ಲಿ ಭಾಗಿಯಾಗಿದ್ದರು. ಇವರಿಗೂ ಅರಾಫತ್‌ ಪ್ರೇರಣೆ ನೀಡಿದ್ದ. ಆ ನಂತದಲ್ಲಿ ಶಿವಮೊಗ್ಗದಲ್ಲಿ ಸ್ಫೋಟಿಸುವ ಪ್ರಯೋಗ ನಡೆದಿತ್ತು. ಅಂತಿಮವಾಗಿ ಕುಕ್ಕರ್ ಬಾಂಬ್ ಸ್ಫೋಟಿಸಲು ಶಾರಿಕ್ ಸಂಚು ರೂಪಿಸಿದ್ದ. 2022 ನವೆಂಬರ್ 19ರಂದು ಕುಕ್ಕರ್ ಬಾಂಬ್ ಹಿಡಿದು ಆಟೊರಿಕ್ಷಾದಲ್ಲಿ ತರುವ ವೇಳೆ ಅದು ಸ್ಫೋಟಗೊಂಡಿತ್ತು. ಆದರೆ, ಆಗ ಶಾರಿಕ್ ಗುರಿ ಯಾವುದಿತ್ತು ಎಂಬ ಬಗ್ಗೆ ಸ್ಪಷ್ಟತೆ ದೊರೆತಿರಲಿಲ್ಲ. ಬಾಂಬ್ ಸ್ಫೋಟದಲ್ಲಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದ ಶಾರಿಕ್‌, ಗುಣಮುಖನಾದ ಮೇಲೆ ಎನ್‌ಐಎ ತಂಡ ಆತನನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT