ಮಂಗಳೂರು: ನಗರದ ಪಿಂಟೋಸ್ ಲೇನ್‌ನ ನಿವಾಸಿ ತಬಲಾ ಕಲಾವಿದ ಹಾಗೂ ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಬಲಾ ಕಲಾವಿದ ಸುರೇಶ್ (52) ಹಾಗೂ ಅವರ ಪತ್ನಿ ವಾಣಿ ಆತ್ಮಹತ್ಯೆ ಮಾಡಿಕೊಂಡವರು. ವಾಣಿ ಖಾಸಗಿ ಕಾಲೇಜೊಂದರಲ್ಲಿ ಕರ್ಕ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.
ಸುರೇಶ್ ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಡಿದ್ದು, ಅವರ ಪತ್ನಿ ವಾಣಿ ಮನೆಯೊಳಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರ್ಥಿಕ ಮುಗ್ಗಟ್ಟಿನಿಂದ ದಂಪತಿಗಳು ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.
ಅವರಿಗೆ ಒಬ್ಬ ಪುತ್ರ ಇದ್ದಾನೆ. ಸ್ಥಳಕ್ಕೆ ಕದ್ರಿ ಪೋಲಿಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.