ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಡಿವೈಎಫ್‌ಐನಿಂದ ಉಳ್ಳಾಲ ಪೊಲೀಸ್‌ ಠಾಣೆಗೆ ಮುತ್ತಿಗೆ ಯತ್ನ

Published 16 ಜನವರಿ 2024, 6:07 IST
Last Updated 16 ಜನವರಿ 2024, 6:07 IST
ಅಕ್ಷರ ಗಾತ್ರ

ಉಳ್ಳಾಲ (ದಕ್ಷಿಣ ಕನ್ನಡ): ‘ಮಂಡ್ಯದಲ್ಲಿ ದ್ವೇಷ ಭಾಷಣ ಮಾಡಿರುವ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಪ್ರತಿಭಟನೆ ನಡೆಸಿದ್ದ ಡಿವೈಎಫ್‌ಐನವರ ಮೇಲೆ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ’ ಎಂದು ಆರೋಪಿಸಿ ಮತ್ತು ಪೊಲೀಸರ ಕ್ರಮ ಖಂಡಿಸಿ ಡಿವೈಎಫ್‌ಐನವರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿದರು.

ಮಾಸ್ತಿಕಟ್ಟೆಯಿಂದ ಉಳ್ಳಾಲ ಪೊಲೀಸ್‌ ಠಾಣೆವರೆಗೆ ಮೆರವಣಿಗೆ ನಡೆಸಿ, ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು.

‘ಪೊಲೀಸರು ಆರ್‌ಎಸ್‌ಎಸ್‌ ಮತ್ತು ಶಾಸಕರ ಅಣತಿಯಂತೆ ವರ್ತಿಸುತ್ತಿದ್ದಾರೆ’ ಎಂದು ಘೋಷಣೆ ಕೂಗಿದರು. 

ಸಂಘಟನೆಯ ಮುಖಂಡ ರಜಾಕ್‌ ಮೊಂಟೆಪದವು ಹಾಗೂ ಹೋರಾಟಗಾರರ ವಿರುದ್ಧ ದಾಖಲಿಸಿರುವ ಪ್ರಕರಣ ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು, ಪ್ರತಿಭಟನಾಕಾರರನ್ನು ತಡೆದರು. ಈ ವೇಳೆ ಕಾರ್ಯಕರ್ತರು ಒಳನುಸುಳದಂತೆ ಪೊಲೀಸರು ಠಾಣೆಗೆ ಬೀಗ ಹಾಕಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT