ಗುರುವಾರ , ಫೆಬ್ರವರಿ 20, 2020
29 °C

ಮಂಗಳೂರು: ಅಟೋಮೊಬೈಲ್ ಅಂಗಡಿಗೆ ಬೆಂಕಿ, ದುಷ್ಕರ್ಮಿಗಳ ಕೃತ್ಯ ಶಂಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನಗರ ಹೊರವಲಯದ ದೇರಳಕಟ್ಟೆಯಲ್ಲಿ ಅಟೋಮೊಬೈಲ್ ಅಂಗಡಿಯಲ್ಲಿ ಬೆಂಕಿ ಅನಾಹುತ ನಡೆದಿದ್ದು, ದುಷ್ಕರ್ಮಿಗಳು ಬೆಂಕಿ ಹಚ್ಚಿರಬಹುದು ಎಂದು ಶಂಕಿಸಲಾಗಿದೆ.

ಸುರೇಶ್ ರೈ ಅವರ ಭಾರತ್ ಅಟೋಮೊಬೈಲ್ ಅಂಗಡಿಯಲ್ಲಿ ದುರ್ಘಟನೆ ನಡೆದಿದೆ. ಸುರೇಶ್ ರೈ ಅವರು ಗುರುವಾರ ರಾತ್ರಿ ಬೀಗ ಹಾಕಿ ತೆರಳಿದ್ದರು. ಶುಕ್ರವಾರ ಬೆಳಿಗ್ಗೆ ಬಂದು ನೋಡಿದಾಗ ಬೆಂಕಿಯಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.

ಈಚೆಗೆ ದೇರಳಕಟ್ಟೆ ಪರಿಸರದಲ್ಲಿ ಪ್ರತಿಭಟನೆಗೆ ತಂದಿದ್ದ ಕುರ್ಚಿಗಳನ್ನು ಸಾಗಿಸಲು ನಿಂತಿದ್ದ ಲಾರಿಗೆ ಬೆಂಕಿ‌ಹತ್ತಿಕೊಂಡಿತ್ತು. ಬೆಂಕಿ ಹಾಕಿರುವ ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುವುದಾಗಿ‌ ಕೆಲ ಸಂಘಟನೆಗಳು ಎಚ್ಚರಿಕೆ ನೀಡಿದ್ದವು.‌

ಪೊಲೀಸರ ಮನವಿಯ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂದಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ... ಮಂಗಳೂರು: ಸಿಎಎ ವಿರುದ್ಧದ ಪ್ರತಿಭಟನೆಗೆ ಕುರ್ಚಿ ತಂದಿದ್ದ ಲಾರಿ ಬೆಂಕಿಗೆ ಆಹುತಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು