ಗುರುವಾರ , ಜುಲೈ 29, 2021
24 °C

ಎರಡು ವಿಮಾನಗಳಲ್ಲಿ 291 ಮಂದಿ ತವರಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಲಾಕ್‌ಡೌನ್‌ ಮತ್ತು ಉದ್ಯೋಗ ನಷ್ಟದಿಂದ ಸೌದಿ ಅರೇಬಿಯಾ ಹಾಗೂ ಮಸ್ಕತ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 291 ಜನರು ಎರಡು ವಿಮಾನಗಳಲ್ಲಿ ಮಂಗಳವಾರ ಮಂಗಳೂರಿಗೆ ಮರಳಿದ್ದಾರೆ.

ಸೌದಿ ಅರೇಬಿಯಾದ ಕೆಎಂಟಿ ಕಂಪನಿ ವ್ಯವಸ್ಥೆ ಮಾಡಿದ್ದ ಬಾಡಿಗೆ ವಿಮಾನದಲ್ಲಿ 180 ಜನರು ಬಂದಿದ್ದಾರೆ. ಬೆಳಿಗ್ಗೆ 6.30ಕ್ಕೆ ದಮ್ಮಾಮ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ವಿಮಾನ ಮಧ್ಯಾಹ್ನ 1.30ಕ್ಕೆ ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.

ಕೇಂದ್ರ ಸರ್ಕಾರದ ವಂದೇ ಭಾರತ್‌ ಮಿಷನ್‌ನಡಿ ಮಸ್ಕತ್‌ನಿಂದ ಹೊರಟ ವಿಮಾನ ಬೆಂಗಳೂರು ಮಾರ್ಗವಾಗಿ ಮಂಗಳವಾರ ರಾತ್ರಿ 10.45ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನಕ್ಕೆ ಬಂದಿಳಿಯಿತು. ಈ ವಿಮಾನದಲ್ಲಿ ಕರಾವಳಿಯ 111 ಜನರು ತವರಿಗೆ ಹಿಂದಿರುಗಿದರು.

ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಪ್ರವೀಣ್‌ ನೇತೃತ್ವದ ಅಧಿಕಾರಿಗಳ ತಂಡ ಎಲ್ಲ ಪ್ರಯಾಣಿಕರ ದಾಖಲೆಗಳನ್ನು ಪರಿಶೀಲಿಸಿತು. ಬಳಿಕ ಎಲ್ಲ 291 ಜನರನ್ನೂ ಸಾಂಸ್ಥಿಕ ಕ್ವಾರಂಟೈನ್‌ಗೆ ಕಳುಹಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.