ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಲಿಬಾರ್‌ ಪ್ರಕರಣ: 11ಕ್ಕೆ ಅಂತಿಮ ವಿಚಾರಣೆ

Last Updated 7 ಆಗಸ್ಟ್ 2020, 15:29 IST
ಅಕ್ಷರ ಗಾತ್ರ

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದ ಸಂದರ್ಭದಲ್ಲಿ ಡಿಸೆಂಬರ್‌ 19ರಂದು ನಗರದಲ್ಲಿ ನಡೆದ ಪೊಲೀಸ್‌ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟಿರುವುದಕ್ಕೆ ಸಂಬಂಧಿಸಿದಂತೆ ಆಗಸ್ಟ್‌ 11ರಂದು ಅಂತಿಮ ಹಂತದ ಮ್ಯಾಜಿಸ್ಟೀರಿಯಲ್‌ ವಿಚಾರಣೆ ನಡೆಯಲಿದೆ.

ಡಿ.19ರಂದು ನಡೆದ ಗೋಲಿಬಾರ್‌ನಲ್ಲಿ ಅಬ್ದುಲ್‌ ಜಲೀಲ್‌ ಮತ್ತು ನೌಶೀನ್‌ ಎಂಬುವವರು ಗುಂಡೇಟಿನಿಂದ ಮೃತಪಟ್ಟಿದ್ದರು. ಈ ಸಂಬಂಧ ಸಾಕ್ಷ್ಯ ಸಲ್ಲಿಸಲು ಅಥವಾ ಹೇಳಿಕೆ ದಾಖಲಿಸಲು ಆ.11ರಂದು ಅಂತಿಮ ಹಂತದ ಅವಕಾಶವಿದೆ ಎಂದು ಮ್ಯಾಜಿಸ್ಟೀರಿಯಲ್ ವಿಚಾರಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೋಲಿಬಾರ್‌ ಘಟನೆಯ ಕುರಿತು ಮಾಹಿತಿ ಹೊಂದಿದ್ದವರು ಅಥವಾ ಘಟನೆಯನ್ನು ನೇರವಾಗಿ ನೋಡಿರುವವರು ಆ.11ರ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1ರ ಅವಧಿಯಲ್ಲಿ ಹಂಪನಕಟ್ಟೆಯ ಮಿನಿ ವಿಧಾನಸೌಧದಲ್ಲಿರುವ ಮಂಗಳೂರು ಉಪ ವಿಭಾಗಾಧಿಕಾರಿ ಕಚೇರಿಗೆ ಹಾಜರಾಗಿ ಸಾಕ್ಷ್ಯ ಸಲ್ಲಿಸಬಹುದು ಅಥವಾ ಹೇಳಿಕೆ ದಾಖಲಿಸಬಹುದು. ಆ ನಂತರ ಸಾರ್ವಜನಿಕರಿಂದ ಯಾವುದೇ ರೀತಿಯ ಹೇಳಿಕೆ ಮತ್ತು ಸಾಕ್ಷ್ಯ ಸಂಗ್ರಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT