ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು–ಹುಬ್ಬಳ್ಳಿ ನೇರ ವಿಮಾನ ಮಾ.10ರಿಂದ ರದ್ದು

Last Updated 4 ಮಾರ್ಚ್ 2023, 5:55 IST
ಅಕ್ಷರ ಗಾತ್ರ

ಮಂಗಳೂರು: ಮಂಗಳೂರು–ಹುಬ್ಬಳ್ಳಿ ಮಧ್ಯೆ ಇದ್ದ ನೇರ ವಿಮಾನ ಸೇವೆ ಇದೇ 10ರಿಂದ ಸ್ಥಗಿತಗೊಳ್ಳಲಿದೆ.

ಕಳೆದ ವರ್ಷದ ಮೇ ತಿಂಗಳಲ್ಲಿ ಇಂಡಿಗೋ ಸಂಸ್ಥೆ ಈ ಮಾರ್ಗದಲ್ಲಿ ವಿಮಾನ ಸೇವೆ ಆರಂಭಿಸಿತ್ತು. ಸೋಮವಾರ, ಬುಧವಾರ, ಶುಕ್ರವಾರ ಈ ಮಾರ್ಗದಲ್ಲಿ ನೇರ ವಿಮಾನ ಸೇವೆ ಇತ್ತು. ಸಂಜೆ 6.30ಕ್ಕೆ ಹುಬ್ಬಳ್ಳಿಯಿಂದ ಹೊರಡುತ್ತಿದ್ದ ವಿಮಾನ ರಾತ್ರಿ 7.35ಕ್ಕೆ ಮಂಗಳೂರು ತಲುಪುತ್ತಿತ್ತು. ಮಂಗಳೂರಿನಿಂದ ರಾತ್ರಿ 8ಕ್ಕೆ ಹೊರಟು ರಾತ್ರಿ 9.05 ಹುಬ್ಬಳ್ಳಿ ತಲುಪುತ್ತಿತ್ತು.

ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವ ಕಾರಣ ಈ ಸೇವೆಯನ್ನು ಇದೇ 10ರಿಂದ ಕೊನೆಗೊಳಿಸಲಾಗುತ್ತಿದೆ. ಹುಬ್ಬಳ್ಳಿಯಿಂದ ಪುಣೆ ಮಾರ್ಗದಲ್ಲಿ ಈ ವಿಮಾನ ಸಂಚರಿಸಲಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT