ಮಂಗಳೂರು:ಕೋವಿಡ್ ಸೋಂಕಿತರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಸಂಪೂರ್ಣ ಲಾಕ್‌ಡೌನ್ ಮಾಡಲಾಗಿದ್ದು ನಗರವು ನಿರ್ಜನವಾಗಿದೆ.

ಸಂಪೂರ್ಣ ಲಾಕ್‌ಡೌನ್ ಕಾರಣದಿಂದ ನಗರದಲ್ಲಿ ಕಾರ್ಮಿಕರು ಹಾಗೂ ಅಗತ್ಯ ಸಾಮಗ್ರಿಗಳ ಸಾಗಾಟದ ವಾಹನಗಳನ್ನು ಹೊರತುಪಡಿಸಿ ನಗರ ಸಂಪೂರ್ಣವಾಗಿ ಬಂದ್ ಆಗಿದೆ. ವ್ಯಾಪಾರ ವಹಿವಾಟು ಸ್ಥಗಿತವಾಗಿದ್ದು ಮಾರುಕಟ್ಟೆ ಸಂಪೂರ್ಣವಾಗಿ ಸ್ತಬ್ಧವಾಗಿದೆ. ಮೆಡಿಕಲ್ ಹಾಗೂ ಅಗತ್ಯ ಸಾಮಗ್ರಿಗಳನ್ನು ಹೊರತುಪಡಿಸಿ ಎಲ್ಲಾ ಅಂಗಡಿಗಳು ಬಂದ್ ಆಗಿದೆ.

ನಾಗರಿಕರು ಲಾಕ್‌ಡೌನ್ ಅನ್ನು ಉಲ್ಲಂಘಿಸದಂತೆ ನೋಡಿಕೊಳ್ಳಲು ಪಂಪ್‌ವೆಲ್ ಮತ್ತು ಟೌನ್‌ಹಾಲ್ ಸೇರಿದಂತೆ ನಗರ ಹಲವು ಪ್ರಮುಖ ರಸ್ತೆಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ನಗರದ ವಿವಿಧ ಸ್ಥಳಗಳಾದ ಲಾಲ್‌ಬಾಗ್, ಪಂಪ್‌ವೆಲ್ ಮತ್ತು ಟೌನ್ ಹಾಲ್‌ನಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಸಂಚಾರ ಮಾಡುತ್ತಿರುವ ಹಲವು ವಾಹನಗಳನ್ನು ಪೊಲೀಸರು ತಡೆದಿದ್ದು ತುರ್ತು ಕಾರಣದಿಂದ ಓಡಾಡುತ್ತಿರುವ ವಾಹನಗಳಿಗೆ ಮಾತ್ರ ಅವಕಾಶ ನೀಡಿದ್ದಾರೆ.

ಭಾನುವಾರ ಲಾಕ್‌ಡೌನ್ ಕಾರಣದಿಂದಾಗಿ ತರಕಾರಿ, ಮಾಸದಂಗಡಿಗಳು ತೆರೆಯಲು ಅವಕಾಶವಿಲ್ಲ ಎಂದು ಶನಿವಾರವೇ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ತಿಳಿಸಿದ್ದಾರೆ. ಹಾಗೆಯೇ ಜಿಲ್ಲಾಡಳಿತದೊಂದಿಗೆ ಜನರು ಸಹಕರಿಸಬೇಕು ಮತ್ತು ಮನೆಯೊಳಗೆ ಉಳಿಯಬೇಕು ಎಂದು ತಿಳಿಸಿದ್ದಾರೆ. ಜುಲೈ 6 ರ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಲಾಕ್‌ಡೌನ್ ಇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.