ಮಂಗಳೂರು: ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರ ಪತ್ನಿ ಬಗ್ಗೆ ಫೇಸ್ಬುಕ್ನಲ್ಲಿ ಅವಹೇಳನಕಾರಿ ಸಂದೇಶ ಪ್ರಕಟಿಸಿದ ಆರೋಪಿಯನ್ನು ಇಲ್ಲಿನ ಬಂದರು ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ.

‘ಬಂಟ್ವಾಳದ ಶರಣ್ ರೈ ಬಂಧಿತ ಆರೋಪಿ. ವಿಧಾನ ಮಂಡಲ ಅಧಿವೇಶನದಲ್ಲಿ ಅರಸೀಕೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಎಂ. ಶಿವಲಿಂಗೇಗೌಡ ಆಡಿದ್ದಾರೆ ಎನ್ನಲಾದ ಮಾತನ್ನು ತಿರುಚಿದ್ದ ಆರೋಪಿಯು ಶಾಸಕ ವೇದವ್ಯಾಸ ಕಾಮತ್ ಪತ್ನಿ ಕುರಿತು ಅವಹೇಳನಕಾರಿ ಸಂದೇಶವನ್ನು ತನ್ನ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದ. ಇದು ಗೃಹಿಣಿಯಾಗಿರುವ ಶಾಸಕರ ಪತ್ನಿಗೆ ಅಗೌರವ ತೋರುವಂತಿದೆ. ಮಹಿಳೆಯರ ಬಗ್ಗೆ ಕೀಳು ಅಭಿರುಚಿಯಿಂದ ಕೂಡಿದ ಪೋಸ್ಟ್ ಇದಾಗಿದೆ ಎಂದು ಜ್ಯೋತಿ ಎಂಬುವವರು ದೂರು ನೀಡಿದ್ದರು. ಅದರ ಆಧಾರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.