ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾಧಿಕಾರಿಗಳ ನೇಮಿಸಿ ಜಿಲ್ಲಾಧಿಕಾರಿ ಆದೇಶ

ಮಂಗಳೂರು ಮಹಾನಗರ ಪಾಲಿಕೆ ಚುನಾವಣಾ ಪ್ರಕ್ರಿಯೆ ಆರಂಭ
Last Updated 22 ಅಕ್ಟೋಬರ್ 2019, 4:44 IST
ಅಕ್ಷರ ಗಾತ್ರ

ಮಂಗಳೂರು: ನವೆಂಬರ್‌ 12ರಂದು ನಡೆಯಲಿರುವ ಮಂಗಳೂರು ಮಹಾನಗರ ಪಾಲಿಕೆ ಸದಸ್ಯರ ಚುನಾವಣೆಗೆ ತಲಾ 12 ಮಂದಿ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.

ಮಹಾನಗರ ಪಾಲಿಕೆಯ 60 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ. ಪ್ರತಿ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗೆ ತಲಾ ಐದು ವಾರ್ಡ್‌ಗಳ ಜವಾಬ್ದಾರಿಯನ್ನು ನೀಡಲಾಗಿದೆ. ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾಧಿಕಾರಿ ಈ ನೇಮಕಾತಿ ಮಾಡಿದ್ದಾರೆ. ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳ ಹೊಣೆ ನೀಡಲಾಗಿದೆ.

ವಾರ್ಡ್‌ ಸಂಖ್ಯೆ 1ರಿಂದ 5ರವರೆಗೆ ಚುನಾವಣಾಧಿಕಾರಿಯಾಗಿ ಮಂಗಳೂರು ಉಪ ವಿಭಾಗಾಧಿಕಾರಿ ರವಿಚಂದ್ರ ನಾಯಕ್‌ (9916821123), ಸಹಾಯಕ ಚುನಾವಣಾಧಿಕಾರಿಯಾಗಿ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗದ ಸಹಾಯಕ ಎಂಜಿನಿಯರ್‌ ಪೂಜಾ (9148516509); ವಾರ್ಡ್‌ ಸಂಖ್ಯೆ 6ರಿಂದ 10ರವರೆಗೆ ಚುನಾವಣಾಧಿಕಾರಿಯಾಗಿ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವೆಂಕಟೇಶ್‌ ಜಿ. (9448230465), ಸಹಾಯಕ ಚುನಾವಣಾಧಿಕಾರಿಯಾಗಿ ಕೆಆರ್‌ಐಡಿಎಲ್‌ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಎಚ್‌.ರಮೇಶ್‌ ಕುಮಾರ್‌ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.

ವಾರ್ಡ್‌ ಸಂಖ್ಯೆ 11ರಿಂದ 15ರವರೆಗೆ ಚುನಾವಣಾಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಯೋಗೀಶ್‌ ಎಸ್‌.ಬಿ (9480843030), ಸಹಾಯಕ ಚುನಾವಣಾಧಿಕಾರಿಯಾಗಿ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ದಿವ್ಯಾ (8748828949); ವಾರ್ಡ್‌ ಸಂಖ್ಯೆ 16ರಿಂದ 20ರವರೆಗೆ ಚುನಾವಣಾಧಿಕಾರಿಯಾಗಿ ಕೃಷಿ ಇಲಾಖೆ ಉಪ ನಿರ್ದೇಶಕ ಭಾನುಪ್ರಕಾಶ್‌ (8277931061), ಸಹಾಯಕ ಚುನಾವಣಾಧಿಕಾರಿಯಾಗಿ ನಗರ ಮಾಪನ ವಿಚಾರಣಾಧಿಕಾರಿ ಕಚೇರಿಯ ಕಾರ್ಯನಿರ್ವಹಣಾಧಿಕಾರಿ ಸಣ್ಣರಂಗಯ್ಯ (7338221766) ನೇಮಕಗೊಂಡಿದ್ದಾರೆ.

ವಾರ್ಡ್‌ ಸಂಖ್ಯೆ 21ರಿಂದ 25ರವರೆಗೆ ಚುನಾವಣಾಧಿಕಾರಿಯಾಗಿ ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಗೋಕುಲ್‌ ದಾಸ್‌ ನಾಯಕ್‌ (9448951722), ಸಹಾಯಕ ಚುನಾವಣಾಧಿಕಾರಿಯಾಗಿ ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್‌ ಬಿ.ಕೆ.ಸಂಜೀವಕುಮಾರ್‌ (7899272645); ವಾರ್ಡ್‌ ಸಂಖ್ಯೆ 26ರಿಂದ 30ರವರೆಗೆ ಚುನಾವಣಾಧಿಕಾರಿಯಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಅಭಿವೃದ್ಧಿ ಅಧಿಕಾರಿ ಸಚಿನ್‌ ಕುಮಾರ್‌ (8217740732), ಸಹಾಯಕ ಚುನಾವಣಾಧಿಕಾರಿಯಾಗಿ ಪಂಚಾಯತ್ ರಾಜ್‌ ಎಂಜಿನಿಯರಿಂಗ್‌ ವಿಭಾಗದ ಸಹಾಯಕ ಎಂಜಿನಿಯರ್‌ ಜಿ.ಕೆ.ನಾಯ್ಕ್ (9448815334) ಕಾರ್ಯನಿರ್ವಹಿಸಲಿದ್ದಾರೆ.

ವಾರ್ಡ್‌ ಸಂಖ್ಯೆ 31ರಿಂದ 35ರವರೆಗೆ ಚುನಾವಣಾಧಿಕಾರಿಯಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಉಸ್ಮಾನ್‌ ಎ. (9448822915), ಸಹಾಯಕ ಚುನಾವಣಾಧಿಕಾರಿಯಾಗಿ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್‌ ಟಿ.ಡಿ.ಶ್ರೀಧರ್‌ (9482478797); ವಾರ್ಡ್‌ ಸಂಖ್ಯೆ 36ರಿಂದ 40ರವರೆಗೆ ಚುನಾವಣಾಧಿಕಾರಿಯಾಗಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಉದಯ ಶೆಟ್ಟಿ (9480044615), ಸಹಾಯಕ ಚುನಾವಣಾಧಿಕಾರಿಯಾಗಿ ಜಲ ಸಂಪನ್ಮೂಲ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಎಂ.ಚಂದ್ರಶೇಖರ್‌ (9483652888) ಅವರನ್ನು ನೇಮಿಸಲಾಗಿದೆ.

ವಾರ್ಡ್‌ ಸಂಖ್ಯೆ 41ರಿಂದ 45ರವರೆಗೆ ಚುನಾವಣಾಧಿಕಾರಿಯಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ವಿಶೇಷ ಭೂಸ್ವಾಧೀನಾಧಿಕಾರಿ ಡಾ.ಎಂ.ದಾಸೇಗೌಡ (9964177512), ಸಹಾಯಕ ಚುನಾವಣಾಧಿಕಾರಿಯಾಗಿ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗದ ಸಹಾಯಕ ಎಂಜಿನಿಯರ್‌ ನಿತಿನ್‌ ನಾಯ್ಕ್‌ (9844884225); ವಾರ್ಡ್‌ ಸಂಖ್ಯೆ 46ರಿಂದ 50ರವರೆಗೆ ಚುನಾವಣಾಧಿಕಾರಿಯಾಗಿ ಮೀನುಗಾರಿಕಾ ಇಲಾಖೆ ಉಪ ನಿರ್ದೇಶಕ ತಿಪ್ಪೇಸ್ವಾಮಿ (9886134750), ಸಹಾಯಕ ಚುನಾವಣಾಧಿಕಾರಿಯಾಗಿ ಲೋಕೋಪಯೋಗಿ ಇಲಾಖೆಯ ಸಹಾಯಕ ಎಂಜಿನಿಯರ್‌ ದಾಸಪ್ರಕಾಶ್‌ (9449968358) ನೇಮಕಗೊಂಡಿದ್ದಾರೆ.

ವಾರ್ಡ್‌ ಸಂಖ್ಯೆ 51ರಿಂದ 55ರವರೆಗೆ ಚುನಾವಣಾಧಿಕಾರಿಯಾಗಿ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಅಪ್ಪಾಜಿ ಗೌಡ (9448600129), ಸಹಾಯಕ ಚುನಾವಣಾಧಿಕಾರಿಯಾಗಿ ಜಲ ಸಂಪನ್ಮೂಲ ಇಲಾಖೆಯ ಸಹಾಯಕ ಎಂಜಿನಿಯರ್‌ ರಾಜೇಶ್‌ (9986412049); ವಾರ್ಡ್‌ ಸಂಖ್ಯೆ 56ರಿಂದ 60ರವರೆಗೆ ಚುನಾವಣಾಧಿಕಾರಿಯಾಗಿ ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್‌ ಎಸ್‌.ಕೆ.ಚಂದ್ರಶೇಖರ್‌ (9448252633), ಸಹಾಯಕ ಚುನಾವಣಾಧಿಕಾರಿಯಾಗಿ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಎಂಜಿನಿಯರ್‌ ಸಂದೀಪ್‌ ಕುಮಾರ್‌ ಜೈನ್‌ (9449119091) ಕಾರ್ಯನಿರ್ವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT