ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ತುಘಲಕ್ ಆಡಳಿತ: ಮಿಥುನ್ ರೈ

Last Updated 10 ನವೆಂಬರ್ 2020, 10:11 IST
ಅಕ್ಷರ ಗಾತ್ರ

ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆ ಅಡಿ ಮಂಗಳೂರು ಮಹಾನಗರವನ್ನು ಅಭಿವೃದ್ಧಿಪಡಿಸುವ ಬದಲಾಗಿ ಬಿಜೆಪಿ ನೇತೃತ್ವದ ಮಹಾ ನಗರ ಪಾಲಿಕೆ ಆಡಳಿತ ಮತ್ತು ಶಾಸಕರು ತುಘಲಕ್ ದರ್ಬಾರ್ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್‌ ರೈ ಆರೋಪಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ವರ್ಗಕ್ಕೆ ಅನುಭವದ ಕೊರತೆ ಇದೆಯೋ? ಅಥವಾ ಜನರ ತೆರಿಗೆ ಹಣ ಇದೆ ಎಂದು ಯಥೇಚ್ಛವಾಗಿ ದುಂದುವೆಚ್ಚ ಮಾಡಲಾಗುತ್ತಿದೆಯೋ? ಎಂದು ತಿಳಿಯುತ್ತಿಲ್ಲ. ಬೇಕಾಬಿಟ್ಟಿ ರಸ್ತೆಗಳನ್ನು ಅಗೆದು‌ ಜನಸಾಮಾನ್ಯರಿಗೆ ತೊಂದರೆ ಕೊಡಲಾಗುತ್ತಿದೆ. ಸೋಮವಾರ ನಗರವಿಡೀ ಬ್ಲಾಕ್ ಆಗಿದ್ದು, ಜನರು ತೀವ್ರ ತೊಂದರೆ ಅನುಭವಿಸಿದ್ದರು.‌ ಕಾಮಗಾರಿ ಇದೀಗ ಆರಂಭಗೊಂಡಿದ್ದು, ಜನರು ಇನ್ನಷ್ಟು ಸಮಸ್ಯೆ ಎದುರಿಸುವ ಸಾಧ್ಯತೆ ಇದೆ. ಹಾಗಾಗಿ ಜಿಲ್ಲಾಧಿಕಾರಿ ತಕ್ಷಣ ಮಧ್ಯಪ್ರವೇಶಿಸಿ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಅವರು ಆಗ್ರಹಿಸಿದರು.

ಮಾಜಿ ಶಾಸಕ ಜೆ.ಆರ್.ಲೋಬೊ, ಪಾಲಿಕೆಯಲ್ಲಿನ ವಿರೋಧ ಪಕ್ಷದ ನಾಯಕ ಅಬ್ದುಲ್ ರವೂಫ್, ಸದಸ್ಯರಾದ ಶಶಿಧರ ಹೆಗ್ಡೆ, ಎ.ಸಿ.ವಿನಯರಾಜ್, ನವೀನ್ ಡಿಸೋಜ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT