ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ನಿಫಾ ಶಂಕೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ವರದಿ ನೆಗೆಟಿವ್

Last Updated 15 ಸೆಪ್ಟೆಂಬರ್ 2021, 3:14 IST
ಅಕ್ಷರ ಗಾತ್ರ

ಮಂಗಳೂರು: ನಿಫಾ ಸೋಂಕಿನ ಶಂಕೆಯಲ್ಲಿ ಇಲ್ಲಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ಪರೀಕ್ಷಾ ವರದಿ‌ ನೆಗೆಟಿವ್ ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದ್ದಾರೆ.

ಗೋವಾದಲ್ಲಿ ಆರ್​ಟಿ-ಪಿಸಿಆರ್​ ಕಿಟ್ ತಯಾರಿಸುವ ಪ್ರಯೋಗಾಲಯದಲ್ಲಿ ಮೈಕ್ರೊ ಬಯಾಲಜಿಸ್ಟ್​ ಆಗಿ ಕೆಲಸ ಮಾಡುತ್ತಿರುವ ಈ ವ್ಯಕ್ತಿ, ಕಾರವಾರದಲ್ಲಿರುವ ಮನೆಗೆ ಬೈಕ್ ನಲ್ಲಿ ಬರುವಾಗ ಮಳೆಯಲ್ಲಿ ನೆನೆದುಕೊಂಡು ಬಂದಿದ್ದರು. ಎರಡು ದಿನಗಳ ಹಿಂದೆ ಅವರಿಗೆ ಜ್ವರ ಬಂದಿತ್ತು.

ಗೂಗಲ್ ಮಾಡಿದ್ದ ಅವರು, ಜ್ವರದ ಲಕ್ಷಣಗಳನ್ನು ಆಧರಿಸಿ, ನಿಫಾ ಎಂದು ಶಂಕಿಸಿ ಆಸ್ಪತ್ರೆ ಗೆ ದಾಖಲಾಗಿದ್ದರು. ಅವರ ಗಂಟಲು ದ್ರವ, ರಕ್ತ ಮತ್ತು ಮೂತ್ರ ಮಾದರಿಯನ್ನು ಸಂಗ್ರಹಿಸಿ, ಪುಣೆಯ ಪ್ರಯೋಗಾಲಯಕ್ಕೆ ತಪಾಸಣೆಗಾಗಿ ಕಳುಹಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT