ಶನಿವಾರ, ಸೆಪ್ಟೆಂಬರ್ 26, 2020
27 °C

ಮಂಗಳೂರು: ನದಿಗೆ ಬಿದ್ದ ಪಿಕ್ಅಪ್ ವಾಹನ, ಚಾಲಕ‌ ಪಾರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಮಂಗಳೂರು: ನೆಲ್ಯಾಡಿ -ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೀರಕಟ್ಟೆ ಸಮೀಪ ಪಿಕಪ್ ಜೀಪೊಂದು ಚಾಲಕನ ನಿಯಂತ್ರಣ ತಪ್ಪಿ ಪಕ್ಕ ಹೊಳೆಗೆ ಬಿದ್ದಿದ್ದು, ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.

ಬೆಳಿಗ್ಗೆ 11 ಗಂಟೆ ವೇಳೆ ಈ ಘಟನೆ‌ ನಡೆದಿದೆ. ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಪಿಕಪ್‌ ನೀರಕಟ್ಟೆ ಸಮೀಪದ ಕಾಂಚನ ಕ್ರಾಸ್‌ ಸಮೀಪ ಚಾಲಕ ಆರೀಫ್‌ ಕೋಲ್ಪೆ ಅವರ ನಿಯಂತ್ರಣ ತಪ್ಪಿ ಪಕ್ಕದ ಹೊಳೆಗೆ ಬಿದ್ದಿದೆ. 

ಆರೀಫ್‌ ಅವರು ಪಿಕ್ಅಪ್ ವಾಹನದಿಂದ ಹೊರಗೆ ಹಾರಿ ಅಪಾಯದಿಂದ ಪಾರಾಗಿದ್ದಾರೆ.  ಸ್ಥಳೀಯರ ಸಹಾಯದಿಂದ ಜೀಪನ್ನು ಹೊಳೆಯಿಂದ ಮೇಲಕ್ಕೆ ತರಲಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು