ಮಂಗಳೂರು: ಬಂಧಿಸಲು ಬಂದ ಪೊಲೀಸರ ಮೇಲೆ ದಾಳಿ ಮಾಡಿದ ನಟೋರಿಯಸ್ ರೌಡಿ ಉಮ್ಮರ್ ಫಾರೂಕ್ ಎಂಬಾತನ ಮೇಲೆ ಗುಂಡಿನ ದಾಳಿ ನಡೆಸಿದ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಘಟನೆಯಲ್ಲಿ ಕಾನ್ಸ್ಟೆಬಲ್ ಸಂದೀಪ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಎರಡು ಪ್ರಕರಣಗಳಲ್ಲಿ ಬೇಕಾಗಿದ್ದ ಉಮ್ಮರ್ ಫಾರೂಕ್ನನ್ನು ಬಂಧಿಸಲು ಮಂಗಳವಾರ ತಡರಾತ್ರಿ ಪೊಲೀಸ್ ತಂಡ ನಗರದ ಹೊರ ವಲಯದ ಪಚ್ಚನಾಡಿಗೆ ತೆರಳಿತ್ತು. ಈ ಸಂದರ್ಭ ಆರೋಪಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ. ಶರಣಾಗುವಂತೆ ಪೊಲೀಸರು ಮನವಿ ಮಾಡಿದರೂ ಆತ ಪ್ರತಿರೋಧ ಒಡ್ಡಿದ್ದಾನೆ. ಅಂತಿಮವಾಗಿ ಆತನ ಕಾಲಿಗೆ ಗುಂಡು ಹೊಡೆದು ಆತನನ್ನು ಬಂಧಿಸಿದ್ದಾರೆ.

ಕೆಲವು ದಿನಗಳ ಹಿಂದೆ ನಟೋರಿಯಸ್ ರೌಡಿ ಗೌರೀಶ್ನನ್ನು ಬಂಧಿಸಲು ಹೋದಾಗ ಜಪ್ಪಿನಮೊಗರು ಬಳಿ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ. ಆತನ ಮೇಲೂ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದರು. ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಭೇಟಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.