ಮಂಗಳೂರು: ನಗರ ಹೊರವಲಯದ ಉಳಾಯಿಬೆಟ್ಟು ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸಕ್ಕಿದ್ದ ಜಾರ್ಖಂಡನ ಕುಟುಂಬದ ಎಂಟು ವರ್ಷದ ಹೆಣ್ಣು ಮಗುವಿನ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಗೂ ಮುನ್ನ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ.

ಮಧ್ಯಪ್ರದೇಶದ ಮೂವರು ಹಾಗೂ ಜಾರ್ಖಂಡ್ ರಾಜ್ಯದ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇವರೆಲ್ಲರೂ ಅದೇ ಫ್ಯಾಕ್ಟರಿಯಲ್ಲಿ ಕೆಲಸ ಮಾಡುವ ಕಾರ್ಮಿಕರಾಗಿದ್ದಾರೆ.

ಬಡ ಕುಟುಂಬದ ಬಾಲಕಿಯ ಮೇಲೆ ಕಣ್ಣಿಟ್ಟಿದ್ದ ಆರೋಪಿಗಳು ಭಾನುವಾರ (ನ.21) ಮಧ್ಯಾಹ್ನ ಆಟವಾಡುತ್ತಿದ್ದ ಬಾಲಕಿಯನ್ನು ಅದೇ ಕಾರ್ಖಾನೆಯ ಆವರಣದಲ್ಲಿದ್ದ ರೂಂಗೆ ಕರೆದೊಯ್ದಿದ್ದಾರೆ. ನಂತರ ಬಾಲಕಿಯ ಮೇಲೆ ಮೂವರು ಅತ್ಯಾಚಾರ ನಡೆಸಿದ್ದಾರೆ.

ಇದರಿಂದ ಬಾಲಕಿಗೆ ಆಘಾತ ಆಗಿದ್ದು, ತೀವ್ರ ರಕ್ತಸ್ರಾವವಾಗಿದೆ. ಬಾಲಕಿ ಕಿರಚಾಡಲು ಆರಂಭಿಸಿದ್ದು, ಒಬ್ಬ ಆರೋಪಿ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಕೃತ್ಯದ ಬಳಿಕ ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ನೀರು ಹರಿಯುವ ಚರಂಡಿಗೆ ಬಾಲಕಿಯ ಶವವನ್ನು ಎಸೆದಿದ್ದಾರೆ.

ಸಂಜೆ ನಾಲ್ಕು ಗಂಟೆಗೆ ಬಾಲಕಿ ಕಾಣಿಸದೇ ಇರುವುದರಿಂದ ಪಾಲಕರು ಹುಡುಕಾಟ ಆರಂಭಿಸಿದ್ದರು. ಟೈಲ್ಸ್ ಫ್ಯಾಕ್ಟರಿಯ ಸ್ವಲ್ಪ ದೂರದಲ್ಲಿರುವ ನೀರು ಹರಿಯುವ ಚರಂಡಿಯಲ್ಲಿ ಸಂಜೆ 6 ಗಂಟೆಗೆ ಬಾಲಕಿಯ ಶವ ಪತ್ತೆಯಾಗಿತ್ತು.

ಟೈಲ್ಸ್ ಫ್ಯಾಕ್ಟರಿಯಲ್ಲಿ 30 ಜನರು ಕೆಲಸ ಮಾಡುತ್ತಿದ್ದಾರೆ. ಭಾನುವಾರ ಆಗಿದ್ದರಿಂದ 19 ಜನ ಕೆಲಸಕ್ಕೆ ಬಂದಿದ್ದರು. ಇದರಲ್ಲಿ ಬಹುತೇಕ ಜನರು ಉತ್ತರ ಭಾರತದವರೇ ಆಗಿದ್ದಾರೆ. ಕೃತ್ಯ ನಡೆದ ದಿನವೇ 10ರಿಂದ 15 ಮಂದಿಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದರು.

ಸೂಕ್ತ ಸಾಕ್ಷಿಗಳನ್ನು ಸಂಗ್ರಹಿಸಿ ಇದೀಗ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಇವನ್ನೂ ಓದಿ...

ಆದಾಯಕ್ಕಿಂತ ಹೆಚ್ಚು ಆಸ್ತಿ: 15 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

ಕಲಬುರಗಿ: ಜೆ.ಇ. ಶಾಂತಗೌಡ ಬಿರಾದಾರ ಮನೆಗಳ ಮೇಲೆ ಎಸಿಬಿ ದಾಳಿ

ಮಂಗಳೂರು: ಎಂಜಿನಿಯರ್ ಲಿಂಗೇಗೌಡ ಮನೆ ಮೇಲೆ ಎಸಿಬಿ ದಾಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.