ಶನಿವಾರ, ಜನವರಿ 18, 2020
20 °C

ಸಹಜ ಸ್ಥಿತಿಯತ್ತ ಮಂಗಳೂರು: ಶಾಲಾ-ಕಾಲೇಜು ಆರಂಭ, ರಸ್ತೆಗಿಳಿದ ಬಸ್‌ಗಳು

ಚಿದಂಬರ ಪ್ರಸಾದ್ Updated:

ಅಕ್ಷರ ಗಾತ್ರ : | |

ಮಂಗಳೂರು: ನಗರದಲ್ಲಿ ಸೋಮವಾರ ಬೆಳಿಗ್ಗೆ 6 ಗಂಟೆಯಿಂದ ಕರ್ಫ್ಯೂ ಹಿಂಪಡೆಯಲಾಗಿದೆ. ಜನಜೀವನ‌ ಸಾಮಾನ್ಯ ಸ್ಥಿತಿಗೆ ಮರಳುತ್ತಿದೆ.

ಶಾಲಾ‌- ಕಾಲೇಜುಗಳು ‌ಆರಂಭವಾಗಿವೆ. ಬಸ್‌ಗಳು ಎಂದಿನಂತೆ ರಸ್ತೆಗಿಳಿದಿವೆ. ಮಾರುಕಟ್ಟೆಯಲ್ಲಿ ಅಂಗಡಿಗಳು ಬಾಗಿಲು ತೆರೆದಿವೆ.‌ ಅಟೊರಿಕ್ಷಾ, ಕಾರು‌ ಸೇರಿದಂತೆ ಎಲ್ಲ‌ ವಾಹನಗಳು‌ ರಸ್ತೆಗೆ ಇಳಿದಿವೆ.

ಪ್ರತಿಭಟನೆಗೆ ಅವಕಾಶ ಇಲ್ಲ: ನಗರದಾದ್ಯಂತ ಕರ್ಫ್ಯೂ ಹಿಂಪಡೆಯಲಾಗಿದ್ದರೂ, ನಿಷೇಧಾಜ್ಞೆ ಜಾರಿಯಲ್ಲಿದೆ. ಹೀಗಾಗಿ ಯಾವುದೇ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಪೊಲೀಸರು‌ ಸ್ಪಷ್ಟಪಡಿಸಿದ್ದಾರೆ. 

ನಗರದ ಸೂಕ್ಷ್ಮ ಪ್ರದೇಶಗಳಲ್ಲಿ‌ತೀವ್ರ ನಿಗಾ ಇಡಲಾಗಿದೆ. ಹಿರಿಯ ಅಧಿಕಾರಿಗಳು ನಗರದಲ್ಲಿ‌ ಠಿಕಾಣಿ‌ ಹೂಡಿದ್ದು, ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.

ಈ ಮೊದಲು‌‌ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ‌ ಕೆಲಸ ಮಾಡಿರುವ ಹಿರಿಯ ಪೊಲೀಸ್ ಅಧಿಕಾರಿಗಳನ್ನು ನಗರಕ್ಕೆ‌ ಕರೆಸಿಕೊಳ್ಳಲಾಗಿದ್ದು, ಪರಿಸ್ಥಿತಿಯ ನಿಯಂತ್ರಣಕ್ಕೆ‌ ಕ್ರಮ ಕೈಗೊಳ್ಳಲಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು