ಉಳ್ಳಾಲ: ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಷನ್ಸ್ (ಐಸಿಸಿಆರ್)ನ 75ನೇ ವರ್ಷದ ಸ್ಥಾಪನಾ ದಿನಾಚರಣೆ ಇತ್ತೀಚೆಗೆ ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿ ನಡೆಯಿತು.

ಮಂಗಳೂರು ವಿವಿ ಕುಲಸಚಿವ ಕೆ.ರಾಜು ಮೊಗವೀರ ಅವರು ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ವಿವಿ ಹಾಗೂ ಅಂತರರಾಷ್ಟ್ರೀಯ ವಿದ್ಯಾರ್ಥಿಗಳ ನಡುವೆ ಅವಿನಾಭಾವ ಸಂಬಂಧ ಇದೆ. ಇಲ್ಲಿರುವ ವಿದ್ಯಾರ್ಥಿಗಳಿಂದ ಪರಸ್ಪರ ದೇಶಗಳ ನಡುವಿನ ಸಾಂಸ್ಕೃತಿಕ ಪರಂಪರೆಯನ್ನು ವಿಸ್ತರಿಸಲು ಸಾಧ್ಯವಾಗಿದೆ. ಶೈಕ್ಷಣಿಕ ಚಟುವಟಿಕೆ ಜೊತೆಗೆ ಇಲ್ಲಿನ ಯಕ್ಷಗಾನ, ದೈವಾರಾಧನೆಯ ಬಗೆಗೂ ಕೆಲವು ವಿದ್ಯಾರ್ಥಿಗಳು ಅರಿವನ್ನು ಬೆಳೆಸಿಕೊಂಡಿದ್ದಾರೆ ಎಂದರು.

ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ದೇವೇಂದ್ರಪ್ಪ, ಮಂಗಳೂರು ವಿವಿ ಇಂಟರ್ ನ್ಯಾಷನಲ್ ಸ್ಟೂಡೆಂಟ್ ಸೆಂಟರ್ ನಿರ್ದೇಶಕ ಪ್ರೊ.ಶೇಖರ್ ಮಾತನಾಡಿದರು.

ಐಸಿಸಿಆರ್ ಬೆಂಗಳೂರು ವಲಯ ನಿರ್ದೇಶಕ ಪ್ರದೀಪ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ನಿರ್ದೇಶಕ ವಿಶ್ವನಾಥ್ ವಂದಿಸಿದರು. ಸೃಷ್ಟಿ ಕಾರ್ಯಕ್ರಮ ನಿರೂಪಿಸಿದರು.

ಗೌರಿ ಸಾಗರ್ ಅವರಿಂದ ಭರತನಾಟ್ಯ ಹಾಗೂ ವಿವಿಯ ಅಂತರರಾಷ್ಟ್ರೀಯ ವಿದ್ಯಾರ್ಥಿಗಳಿಂದ ಸಂಗೀತ, ನೃತ್ಯ ಕಾರ್ಯಕ್ರಮ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.