ಉಳ್ಳಾಲ: ‘ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಅಭಿವೃದ್ಧಿಗೆ ಹಾಗೂ ವಿಶ್ವವಿದ್ಯಾನಿಲಯಕ್ಕೆ ಈ ವಿಭಾಗದ ಹಳೆ ವಿದ್ಯಾರ್ಥಿಗಳು ಅನೇಕ ಮಹತ್ತರ ಕೊಡುಗೆಗಳನ್ನು ನೀಡಿದ್ದಾರೆ. ಮತ್ತು ದೇಶ ವಿದೇಶಗಳಲ್ಲಿ ಉನ್ನತ ಸ್ಥಾನವನ್ನು ಪಡೆದಿರುವುದು ಇಡೀ ವಿಶ್ವವಿದ್ಯಾನಿಲಯಕ್ಕೆ ಹೆಮ್ಮೆಯ ಸಂಗತಿ’ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ಹೇಳಿದರು.

ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಹಳೆ ವಿದ್ಯಾರ್ಥಿಗಳ ಸ್ಮೇಹ ಮಿಲನ ‘ಸಮನ್ವಿತ’ ಕಾರ್ಯಕ್ರಮವನ್ನು ಈಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.

‘ವಿದ್ಯಾಭ್ಯಾಸ ಮುಗಿದ ನಂತರವೂ ವಿದ್ಯಾರ್ಥಿಗಳು ಆಯಾ ವಿಭಾಗದ ಜೊತೆ ಉತ್ತಮ ಸಂಬಂಧವನ್ನು ಮುಂದುವರಿಸಿಕೊಂಡು ಹೋಗಬೇಕು. ವಿಭಾಗದ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು’ ಎಂದರು.

ಅತಿಥಿಗಳಾದ ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಎಂ.ಪಿ.ಸುಬ್ರಹ್ಮಣ್ಯ ಮಾತನಾಡಿ, ‘ಉನ್ನತ ಶಿಕ್ಷಣವು ಸಂಶೋಧನೆಗೆ ಹೆಚ್ಚು ಹೆಚ್ಚು ಅವಕಾಶಗಳನ್ನು ಕಲ್ಪಿಸಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.