ಮಂಗಳೂರು: ಸಂಧ್ಯಾ ಕಾಲೇಜಿನ ಶಿಕ್ಷಣವು ಸಮಯದ ಹೊಂದಾಣಿಕೆಯೇ ಹೊರತು ಹಗಲು ಶಿಕ್ಷಣದಿಂದ ಭಿನ್ನವಾಗಿಲ್ಲ, ಎಂದು ಅಂತರರಾಷ್ಟ್ರೀಯ ವ್ಯಕ್ತಿತ್ವ ವಿಕಸನ ತರಬೇತುದಾರ ರಾಜೇಂದ್ರ ಭಟ್ ಕಾರ್ಕಳ ಅಭಿಪ್ರಾಯಪಟ್ಟರು.

ವಿಶ್ವವಿದ್ಯಾಲಯ ಸಂಧ್ಯಾ ಕಾಲೇಜು ಮಂಗಳೂರು ಇಲ್ಲಿನ ಸ್ನಾತಕೋತ್ತರ ವಿಭಾಗಗಳ ವಾರ್ಷಿಕ ದಿನಾಚರಣೆಯನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಭಾರ ಲೆಕ್ಕಿಸದೆ ಸಂಧ್ಯಾ ಕಾಲೇಜಿನಲ್ಲಿ ಶಿಕ್ಷಣ ಪಡೆಯಲು ಬರುವ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಛಲ ಇರುತ್ತದೆ. ಅವರ ಸುಪ್ತ ಪ್ರತಿಭೆ ಕ್ಲಪ್ತ ಸಮಯದಲ್ಲಿ ವ್ಯಕ್ತವಾಗಲು ಸಂಧ್ಯಾ ಕಾಲೇಜು ಸ್ಫೂರ್ತಿದಾಯಕವಾದುದು ಎಂದರು.

ಕಾಲೇಜಿನ ಪ್ರಾಂಶುಪಾಲೆ ಡಾ. ಸುಭಾಷಿಣಿ ಶ್ರೀವತ್ಸ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಜಿಎಸ್ಟಿ ವಿಭಾಗದ ಸಂಯೋಜಕ ಡಾ. ಯತೀಶ್ ಕುಮಾರ್, ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಯೋಜಕ ಡಾ. ಮಾಧವ ಎಂ.ಕೆ, ಎಂಬಿಎ (ಐಬಿ) ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ. ಜಗದೀಶ್ ಬಿ., ಕೊಂಕಣಿ ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ. ದೇವದಾಸ್ ಪೈ ಇದ್ದರು.

ಕಳೆದ ಶೈಕ್ಷಣಿಕ ವರ್ಷದಲ್ಲಿ ವಿ.ವಿ. ಮಟ್ಟದಲ್ಲಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಉಪನ್ಯಾಸಕರಾದ ಸುಭಾಶ್ಚಂದ್ರ ಕಣ್ವತೀರ್ಥ ವಂದಿಸಿದರು. ಪ್ರಶಾಂತಿ ಶೆಟ್ಟಿ ಇರುವೈಲು ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.