ಸೋಮವಾರ, ಜನವರಿ 25, 2021
27 °C
ಮಂಗಳೂರು ವಿವಿ ಕುಲಸಚಿವ ರಾಜು ಮೊಗವೀರ

ಪದವಿ ವಿದ್ಯಾರ್ಥಿಗಳಿಗೆ ಶೀಘ್ರ ಪರಿಷ್ಕೃತ ವೇಳಾಪಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ’ಮಂಗಳೂರು ವಿಶ್ವವಿದ್ಯಾಲಯವು ಶೀಘ್ರದಲ್ಲೇ ಯುಜಿಸಿ ನಿಯಮಗಳ ಅನ್ವಯ ಪರಿಷ್ಕೃತ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಿದೆ’ ಎಂದು ಕುಲಸಚಿವ ಕೆ. ರಾಜು ಮೊಗವೀರ ಹೇಳಿದರು.

ಮಂಗಳೂರಿನ ವಿಶ್ವವಿದ್ಯಾಲಯ ಕಾಲೇಜಿಗೆ ಭೇಟಿ ನೀಡಿದ ಅವರು, ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿಯೊಂದಿಗೆ ಮಾತನಾಡಿದರು.

’ಪರಿಷ್ಕೃತ ವೇಳಾಪಟ್ಟಿಯಿಂದ ವಿದ್ಯಾರ್ಥಿಗಳು, ಪೋಷಕರು, ಪ್ರಾಧ್ಯಾಪಕರು ಆತಂಕ ಪಡಬೇಕಾಗಿಲ್ಲ. ಪದವಿಯ ಎಲ್ಲ ವಿದ್ಯಾರ್ಥಿಗಳಿಗೆ ತರಗತಿ ಪಾಠ ಆರಂಭಿಸುವ ಕುರಿತೂ ಪ್ರಯತ್ನಗಳು ನಡೆಯುತ್ತಿವೆ’ ಎಂದರು.

’ಈಗಾಗಲೇ ವಿವಿಧ ಕಾಲೇಜುಗಳ ಪ್ರಾಂಶುಪಾಲರ ಸಭೆ ನಡೆಸಲಾಗಿದೆ. ಮುಖ್ಯವಾಗಿ ಕಾಲೇಜಿಗೆ ಬರುವ ಆತ್ಮವಿಶ್ವಾಸ ವಿದ್ಯಾರ್ಥಿಗಳಲ್ಲಿ ಮೂಡಬೇಕು’ ಎಂದ ಅವರು, ಅತಿಥಿ ಉಪನ್ಯಾಸಕರ ನೇಮಕಾತಿ ಪಟ್ಟಿಯನ್ನು ವಾರಾಂತ್ಯದೊಳಗೆ ಬಿಡುಗಡೆ ಮಾಡುವುದಾಗಿ ಹೇಳಿದರು.

‘ವಿಶ್ವವಿದ್ಯಾಲಯ ಕಾಲೇಜಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿಕೊಂಡ ಅವರು, ಅಗತ್ಯ ಸಹಕಾರ ನೀಡುವುದಾಗಿ ಹೇಳಿದರು. ಕಾಲೇಜುಗಳು ತಮಗಿರುವ ಸ್ವಾತಂತ್ರ್ಯವನ್ನು ಬಳಸಿಕೊಂಡು ಅಭಿವೃದ್ಧಿ ಪಥದತ್ತ ಮುನ್ನಡೆಯಬೇಕು. ಕಾಲೇಜಿನ ಸ್ವಚ್ಛತೆ, ಪೀಠೋಪಕರಣಗಳ ನಿರ್ವಹಣೆ, ಪ್ರಥಮ ಚಿಕಿತ್ಸೆಗೆ ಗಮನ ಹರಿಸುವಂತೆಯೂ ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಹರೀಶ್ ಎ., ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ವಿಭಾಗದ ಹಿರಿಯ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು