ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯವು ಡಿಜಿಟಲ್ ಮೌಲ್ಯಮಾಪನ ವ್ಯವಸ್ಥೆ ಅಳವಡಿಸಿಕೊಳ್ಳಲು ಮುಂದಾಗಿದೆ. ಮುಂದಿನ ಸೆಮಿಸ್ಟರ್ನಲ್ಲಿ ಇದು ಜಾರಿಯಾಗಲಿದ್ದು, ಮೊದಲ ಹಂತದಲ್ಲಿ ಸ್ನಾತಕೋತ್ತರ ಕೋರ್ಸ್ಗಳಲ್ಲಿ ಈ ಪದ್ಧತಿ ಅನುಷ್ಠಾನಗೊಳ್ಳಲಿದೆ.

ಶನಿವಾರ ನಡೆದ ವಿವಿಯ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಕುಲಪತಿ ಪ್ರೊ. ಪಿ.ಎಲ್.ಧರ್ಮ ಈ ಬಗ್ಗೆ ಮಾಹಿತಿ ನೀಡಿದರು. ಉತ್ತರ ಪತ್ರಿಕೆಗಳ ಕೋಡಿಂಗ್, ಡಿಕೋಡಿಂಗ್ ಮಾಡಿದ ನಂತರ ಕಟಿಂಗ್ ಮಾಡಿ ಸ್ಕ್ಯಾನ್ ಮಾಡಲಾಗುತ್ತದೆ. ಪ್ರತಿ 20 ಉತ್ತರ ಪತ್ರಿಕೆಗಳ ಒಂದು ಫೋಲ್ಡರ್ ಸೃಷ್ಟಿಸಲಾಗುತ್ತದೆ. ಬೇರೆಯವರ ಬಳಿ ಮೌಲ್ಯಮಾಪನ ಮಾಡುವುದಾಗಲಿ ಅಥವಾ ಯಾವುದೇ ರೀತಿಯ ನಿರ್ಲಕ್ಷ್ಯ ಆಗದಂತೆ ಎಚ್ಚರಿಕೆ ವಹಿಸಲು, ಕಂಪ್ಯೂಟರ್ ತೆರೆಯುವ ಪೂರ್ವದಲ್ಲಿ ಮೌಲ್ಯಮಾಪಕರ ಮೊಬೈಲ್ ಫೋನ್ಗೆ ಒಟಿಪಿ ಬರುವಂತೆ, ಅಥವಾ ಬೆರಳು ಸ್ಕ್ಯಾನ್ ಮಾಡುವ ವ್ಯವಸ್ಥೆ ಅಳವಡಿಸಲಾಗುತ್ತದೆ ಎಂದು ಹೇಳಿದರು.

ಸ್ನಾತಕೋತ್ತರ ಪದವಿಯಲ್ಲಿ 2 ಸಾವಿರದಷ್ಟು ವಿದ್ಯಾರ್ಥಿಗಳು, ಅಂದಾಜು 20 ಸಾವಿರ ಉತ್ತರ ಪತ್ರಿಕೆಗಳು ಇರುವುದರಿಂದ ಪ್ರಥಮ ಹಂತದಲ್ಲಿ ಪಿಜಿಯ ಎಲ್ಲ ಕೋರ್ಸ್ಗಳಿಗೆ ಡಿಜಿಟಲ್ ಮೌಲ್ಯಮಾಪನ ಅಳವಡಿಸಲಾಗುತ್ತದೆ. ಮುಂದಿನ ಜೂನ್ನಲ್ಲಿ ಇದು ಅನುಷ್ಠಾನಗೊಳ್ಳಲಿದ್ದು, ವಿವಿಯ ಆವರಣದಲ್ಲೇ ಮೌಲ್ಯಮಾಪನ ನಡೆಯಲಿದೆ. ಪದವಿ ಹಂತದಲ್ಲಿ ಅಂದಾಜು 7 ಲಕ್ಷ ಉತ್ತರ ಪತ್ರಿಕೆಗಳು ಇರುವುದರಿಂದ, ಮುಂದಿನ ಹಂತದಲ್ಲಿ ಇದರ ಬಗ್ಗೆ ಯೋಚಿಸಲಾಗುವುದು. ಕೆಲವು ಖಾಸಗಿ ವಿಶ್ವವಿದ್ಯಾಲಯಗಳು ಈ ಕ್ರಮವನ್ನು ಈಗಾಗಲೇ ಅಳವಡಿಸಿಕೊಂಡಿವೆ. ಡಿಜಿಟಲ್ ಮೌಲ್ಯಮಾಪನದಿಂದ ತ್ವರಿತವಾಗಿ ಫಲಿತಾಂಶ ನೀಡಲು ಸಾಧ್ಯವಾಗುತ್ತದೆ, ಜೊತೆಗೆ, ಮೌಲ್ಯಮಾಪಕರಿಗೆ ನೀಡುವ ಪ್ರಯಾಣ ಭತ್ಯೆ ಉಳಿತಾಯವಾಗುತ್ತದೆ ಎಂದು ವಿವರಿಸಿದರು.

ವಿದ್ಯಾರ್ಥಿಗಳಿಗೆ ಮುದ್ರಿತ ಸಮಗ್ರ ಅಂಕಪಟ್ಟಿ ನೀಡುವ ಬಗ್ಗೆ ವಿವಿ ನಿರ್ಧಾರ ಕೈಗೊಂಡು, ಈಗಾಗಲೇ ಪದವಿ ಹಂತದಲ್ಲಿ 17,500 ಅಂಕಪಟ್ಟಿಗಳನ್ನು ಮುದ್ರಿಸಿ ಆಯಾ ಕಾಲೇಜುಗಳಿಗೆ ತಲುಪಿಸಲಾಗಿದೆ. ಪಿಜಿ ವಿದ್ಯಾರ್ಥಿಗಳ ಅಂಕಪಟ್ಟಿ ಮುದ್ರಣ ಪ್ರಗತಿಯಲ್ಲಿದೆ ಎಂದು ಕುಲಪತಿ ಹೇಳಿದರು.

ವಿವಿ ಅಡಿಯಲ್ಲಿ ಬರುವ 131 ಕಾಲೇಜುಗಳು ಮುಂದುವರಿಕೆ ಸಂಯೋಜನೆ, 21 ಕಾಲೇಜುಗಳು ವಿಸ್ತರಣಾ ಸಂಯೋಜನೆ, 28 ಕಾಲೇಜುಗಳು ಶಾಶ್ವತ ಸಂಯೋಜನೆ ಮುಂದುವರಿಕೆ, 11 ಕಾಲೇಜುಗಳು ಹೊಸ ಶಾಶ್ವತ ಸಂಯೋಜನೆಗೆ 2026–27ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ್ದವು. ಎರಡು ಕಾಲೇಜುಗಳು ಹೆಸರು ಬದಲಾಯಿಸಲು, ಒಂದು ಕಾಲೇಜಿನ ಸ್ಥಳ ಬದಲಾವಣೆಗೆ ಅರ್ಜಿ ಸಲ್ಲಿಕೆಯಾಗಿದ್ದು, ಸಭೆಯಲ್ಲಿ ಅನುಮೋದನೆ ನೀಡಲಾಯಿತು.

ನೇತ್ರಜ್ಯೋತಿ ಕಾಲೇಜು ಉಡುಪಿ, ಮಂಗಳಾ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಆ್ಯಂಡ್ ಸೈನ್ಸಸ್ ಪೆದಮಲೆ, ಮಂಗಳೂರು, ಅಡ್ಯಾರ್ ಇಂಟಲೆಕ್ಚುವಲ್ಸ್ ಕಾಲೇಜು ಅಡ್ಯಾರ್, ಶ್ಯಾಮ್ ಇನ್ಸ್ಟಿಟ್ಯೂಟ್ ಕುಂಟಿಕಾನ, ಮಂಗಳೂರು ಹಾಗೂ ಪ್ರೆಸ್ಟೀಜ್ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ಆ್ಯಂಡ್ ಇನ್ನೊವೇಷನ್ ಜೆಪ್ಪಿನಮೊಗರು ಈ ಐದು ಕಾಲೇಜುಗಳು ವಿವಿ ಸಂಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಿದ್ದವು. ಇವುಗಳಲ್ಲಿ ಪ್ರೆಸ್ಟೀಜ್ ಸ್ಕೂಲ್ ಆಫ್ ಮ್ಯಾನೇಜ್ಮೆಂಟ್ ಆ್ಯಂಡ್ ಇನ್ನೊವೇಷನ್ ಕಾಲೇಜು, ಸರ್ಕಾರ ನಿಗದಿಪಡಿಸಿಸುವ ಮಾನದಂಡ ಪಾಲಿಸದೇ ಇರುವ ಸಂಗತಿಯು ಸ್ಥಳೀಯ ವಿಚಾರಣಾ ಸಮಿತಿ ಸ್ಥಳ ಪರಿಶೀಲನೆಯ ವೇಳೆ ಕಂಡುಬಂದಿದೆ ಎಂಬ ಕಾರಣಕ್ಕೆ ಅರ್ಜಿ ತಿರಸ್ಕರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಪರೀಕ್ಷಾಂಗ ಕುಲಸಚಿವ ಪ್ರೊ. ದೇವೇಂದ್ರಪ್ಪ, ಪ್ರಭಾರಿ ಆಡಳಿತ ಕುಲಸಚಿವ ಪ್ರೊ. ಗಣೇಶ ಸಂಜೀವ್ ಇದ್ದರು.

‘ಅಗ್ನಿ ಸುರಕ್ಷತೆ ಇಲ್ಲದಿದ್ದರೆ ಅರ್ಜಿ ತಿರಸ್ಕಾರ’

ವಿಸ್ತರಣಾ ಸಂಯೋಜನೆ ಹೊಸ ಸಂಯೋಜನೆ ಶಾಶ್ವತ ಸಂಯೋಜನೆ ಮುಂದುವರಿಕೆ ಹೊಸ ಶಾಶ್ವತ ಸಂಯೋಜನೆಗೆ ಅರ್ಜಿ ಸಲ್ಲಿಸಿರುವ ಕಾಲೇಜುಗಳು ಕಟ್ಟಡ ಸುರಕ್ಷತೆ ಅಗ್ನಿ ಸುರಕ್ಷತೆ ವ್ಯವಸ್ಥೆ ಭೂ ದಾಖಲೆ ಸೇರಿದಂತೆ ಅಗತ್ಯ ಸೌಲಭ್ಯಗಳ ಬಗ್ಗೆ ಸರ್ಕಾರದ ಆದೇಶ ಹೊರಡಿಸಿದೆ. ಈ ಕಾರಣಕ್ಕೆ ಸರಿಯಾದ ದಾಖಲೆಗಳು ಇಲ್ಲದಿರುವ ಕಾಲೇಜುಗಳ ಪ್ರಸ್ತಾವವನ್ನು ವಿವಿ ಹಂತದಲ್ಲಿಯೇ ತಿರಸ್ಕರಿಸಲಾಗುತ್ತದೆ. ವಿವಿ ಅಡಿಯಲ್ಲಿ ಹಿಂದೆ ಒಟ್ಟು 204 ಕಾಲೇಜುಗಳು ಇದ್ದವು. ಇದು 156ಕ್ಕೆ ಇಳಿಕೆಯಾಗಿದ್ದು ಪ್ರಸ್ತುತ ಹೊಸ ನಾಲ್ಕು ಕಾಲೇಜುಗಳು ಸೇರಿ ಒಟ್ಟು 160 ಕಾಲೇಜುಗಳು ಆಗಿವೆ. ಕಾಲೇಜುಗಳ ಸಂಖ್ಯೆ ಕಡಿಮೆ ಇದ್ದರೂ ನಿಯಮ ಪಾಲನೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಕುಲಪತಿ ಹೇಳಿದರು.

- ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಾಲಾವಕಾಶ

ಸರ್ಕಾರ ಸೂಚಿಸಿದ ಸುರಕ್ಷಾ ಮಾನದಂಡಗಳನ್ನು ಎಲ್ಲ ಕಾಲೇಜುಗಳು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಗತ್ಯ ಸೌಲಭ್ಯ ಹೊಂದಲು ಮತ್ತು ಅದಕ್ಕೆ ಸಂಬಂಧಿಸಿದ ದಾಖಲೆ ಸಲ್ಲಿಸಲು ಜನವರಿ ತಿಂಗಳ ಅಂತ್ಯದವರೆಗೆ ಅವಕಾಶ ನೀಡಲಾಗುವುದು ಎಂದು ಕುಲಪತಿ ತಿಳಿಸಿದರು.

ಅಮ್ಮನ ಹೆಸರಿನಲ್ಲಿ ಹಸಿರು

ಮಂಗಳೂರು ವಿವಿಯಲ್ಲಿ ಹಸಿರು ಹೆಚ್ಚಿಸುವ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗಿದೆ. ಕಳೆದ ಒಂಬತ್ತು ತಿಂಗಳಲ್ಲಿ 600ಕ್ಕೂ ಅಧಿಕ ಮಾವು ಹಲಸು ಚಿಕ್ಕು ಸೇರಿದಂತೆ ಹಣ್ಣಿನ ಗಿಡಗಳನ್ನು ನೆಡಲಾಗಿದೆ. ಅಮ್ಮನ ಹೆಸರಿನಲ್ಲಿ ಹಾಗೂ ವಿದ್ಯಾರ್ಥಿಗಳ ಜನ್ಮದಿನದಂದು ಗಿಡ ನೆಡುವ ಯೋಜನೆ ಪ್ರಾರಂಭಿಸಲಾಗಿದೆ. ವಿದ್ಯಾರ್ಥಿಗಳು ನೆಟ್ಟಿರುವ ಗಿಡಗಳನ್ನು ಅವರೇ ನಿರ್ವಹಣೆ ಮಾಡುವಂತೆ ಮುಂದೆ ಬರುವ ಹೊಸ ವಿದ್ಯಾರ್ಥಿಗಳು ಅವುಗಳನ್ನು ಪೋಷಿಸುವಂತೆ ಸೂಚಿಸಲಾಗಿದೆ ಎಂದು ಪ್ರೊ. ಧರ್ಮ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.