ಮಂಗಳವಾರ, ಸೆಪ್ಟೆಂಬರ್ 28, 2021
22 °C
ಕೇರಳದ ಮಕ್ಕಳಿಗೆ ಹಾಜರಾಗಲು ಅನುಮತಿ

ವಿ.ವಿ ಪರೀಕ್ಷೆ ಸುಗಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಇಲ್ಲಿನ ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಕಾಲೇಜುಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳು ಆರಂಭಗೊಂಡಿದ್ದು, ಪರೀಕ್ಷೆಗಾಗಿ ಬರುವ ಕೇರಳದ ವಿದ್ಯಾರ್ಥಿಗಳು ಹಾಲ್ ಟಿಕೆಟ್ ಹಾಗೂ ಗುರುತಿನ ಪತ್ರಗಳನ್ನು ಹಾಜರುಪಡಿಸುವ ಮೂಲಕ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ. ಮೊದಲ ದಿನದ ಪರೀಕ್ಷೆಯನ್ನು ವಿದ್ಯಾರ್ಥಿಗಳು ಸುಲಲಿತವಾಗಿ ಬರೆಯಲು ಸಾಧ್ಯವಾಯಿತು.

ಕೋವಿಡ್–19 ಮಾರ್ಗಸೂಚಿಗೆ ಅನುಗುಣವಾಗಿ ಬೆಸ ಸಂಖ್ಯೆಯ ಸೆಮಿಸ್ಟರ್‌ ಪದವಿ ಪರೀಕ್ಷೆಗಳು ಸೋಮವಾರ ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಸುಗಮವಾಗಿ ನಡೆದವು. ಕೋವಿಡ್–19 ಬಾಧಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೋಣೆಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು. ಈ ಕೊಠಡಿಗಳ ಉಸ್ತುವಾರಿ ವಹಿಸಿದವರಿಗೆ ಪಿಪಿಇ ಕಿಟ್‌ ಸೇರಿದಂತೆ ಅಗತ್ಯ ಮುಂಜಾಗ್ರತೆ ವಹಿಸಲಾಗಿತ್ತು.

ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳ ಸುಮಾರು 207 ಸಂಯೋಜಿತ ಕಾಲೇಜುಗಳಲ್ಲಿ ಪರೀಕ್ಷೆಗಳು ನಡೆದವು.

ಬೆಳಿಗಿನ ಅವಧಿಯಲ್ಲಿ ಒಟ್ಟು 43 ವಿಷಯಗಳಿಗೆ ಸಂಬಂಧಿಸಿದ ಪರೀಕ್ಷೆಗಳು ನಡೆದಿದ್ದು, ನೋಂದಾಯಿಸಿದ್ದ 23,179 ವಿದ್ಯಾರ್ಥಿಗಳ ಪೈಕಿ, 21,886 ಪರೀಕ್ಷೆ ಬರೆದಿದ್ದಾರೆ. ಮಧ್ಯಾಹ್ನ 20 ವಿಷಯಗಳಿಗೆ ಸಂಬಂಧಿಸಿದ ಪರೀಕ್ಷೆಗಳು ನಡೆದಿವೆ. 17,193 ವಿದ್ಯಾರ್ಥಿಗಳ ಪೈಕಿ, 16,691 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು