ಮೂಡುಬಿದಿರೆ (ದಕ್ಷಿಣ ಕನ್ನಡ): ಮಂಗಳೂರು ವಿಶ್ವವಿದ್ಯಾಲಯ ತಂಡ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕ್ರಾಸ್ ಕಂಟ್ರಿ ಚಾಂಪಿಯನ್ಷಿಪ್ನ ಪ್ರಶಸ್ತಿ ತನ್ನದಾಗಿಸಿಕೊಂಡಿತು.
ಇಲ್ಲಿನ ಆಳ್ವಾಸ್ ಕಾಲೇಜು ವಿದ್ಯಾರ್ಥಿನಿಯರು ಮಂಗಳೂರು ವಿ.ವಿಯನ್ನು ಪ್ರತಿನಿಧಿಸಿದ್ದರು.

ಮಹಿಳೆಯರ ವಿಭಾಗದಲ್ಲಿ ಮಂಗಳೂರು ವಿ.ವಿಗೆ ಇದು 4ನೇ ಪ್ರಶಸ್ತಿ. ಪುಣೆಯ ಸಾವಿತ್ರಿಭಾಯಿ ಫುಲೆ ವಿ.ವಿ ರನ್ನರ್ ಅಪ್ ಆದರೆ, ಹರಿಯಾಣದ ರೋಹ್ಟಕ್ ವಿ.ವಿ ಮೂರನೇ ಸ್ಥಾನ ಗಳಿಸಿತು. ವೈಯಕ್ತಿಕ ವಿಭಾಗದಲ್ಲಿ ಆಳ್ವಾಸ್ನ ತಾಮ್ಸಿ ಪ್ರಥಮ, ಯಾಶಿ ಸಾಚನ್ 3ನೇ ಸ್ಥಾನ, ಜ್ಯೋತಿ 9ನೇ ಸ್ಥಾನ, ಭಾಗೀರಥಿ 13ನೇ ಸ್ಥಾನ ಪಡೆದರು.

ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟೀಸ್ (ಎಐಯು) ಸಹಯೋಗದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ್ದ ಓಟದಲ್ಲಿ ದೇಶದ 133 ವಿವಿಗಳಿಂದ 680ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.