ಮಂಗಳೂರು: ನಗರದ ಮೂರು ಪ್ರಮುಖ ಬಸ್ ಮಾರ್ಗಗಳನ್ನು ವಿಸ್ತರಿಸುವಂತೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿಗೆ ಪತ್ರ ಬರೆದಿರುವ ಅವರು, ‘ಮಾರ್ಗ ಸಂಖ್ಯೆ 5 ಅನ್ನು ಮೊರ್ಗನ್ಸ್ ಗೇಟ್ನಿಂದ ಜಪ್ಪಿನಮೊಗರುವಿಗೆ ವಿಸ್ತರಿಸಬೇಕು. ಬೈಕಂಪಾಡಿ ಪರಿಸರದ ಕೈಗಾರಿಕೆಗಳ ಕಾರ್ಮಿಕರು ಮತ್ತು ನಿತ್ಯ ಪ್ರಯಾಣಿಕರ ಹಿತದೃಷ್ಟಿಯಿಂದ ಮಾರ್ಗ ಸಂಖ್ಯೆ 7 ಅನ್ನು ಉರ್ವ ಸ್ಟೋರ್ನಿಂದ ಬೈಕಂಪಾಡಿ ಕೈಗಾರಿಕಾ ಪ್ರದೇಶದವರೆಗೆ ವಿಸ್ತರಿಸಬೇಕು. ದೇಶ-ವಿದೇಶಗಳ ಪ್ರವಾಸಿಗರಿಗೆ ಮತ್ತು ಸ್ಥಳೀಯ ಸಂದರ್ಶಕರಿಗೆ ನೇರ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಮಾರ್ಗ ಸಂಖ್ಯೆ 13 ಅನ್ನು ಪಣಂಬೂರು ಕಿನಾರೆಯ ಒಳಭಾಗದವರೆಗೆ ವಿಸ್ತರಿಸಬೇಕು’ ಎಂದು ತಿಳಿಸಿದ್ದಾರೆ.

‘ನಗರವು ವೇಗವಾಗಿ ಬೆಳೆಯುತ್ತಿದ್ದು, ಹಲವು ಸಿಟಿ ಬಸ್ಗಳು ಈಗಲೂ ಹಳೆಯ ಮತ್ತು ಸಣ್ಣ ಮಾರ್ಗಗಳಲ್ಲೇ ಸಂಚರಿಸುತ್ತಿವೆ. ಇದರಿಂದ ಹೆಚ್ಚುತ್ತಿರುವ ಸಾರಿಗೆ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ. ಬಸ್ ಆಪರೇಟರ್ಗಳಿಗೂ ನಷ್ಟ ಉಂಟಾಗುತ್ತಿದೆ. ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಈ ಮಾರ್ಗಗಳನ್ನು ವಿಸ್ತರಿಸಬೇಕಿದೆ. ಈ ಮೂರು ಮಾರ್ಗಗಳ ವಿಸ್ತರಣೆಯಿಂದ ದೈನಂದಿನ ಪ್ರಯಾಣಿಕರಿಗೆ, ವಿದ್ಯಾರ್ಥಿಗಳಿಗೆ ಮತ್ತು ಉದ್ಯೋಗಿಗಳಿಗೆ ಅನುಕೂಲವಾಗುತ್ತದೆ. ಕರಾವಳಿಯ ಪ್ರಮುಖ ಪ್ರವಾಸಿ ತಾಣಗಳಿಗೆ ನೇರ ಸಂಪರ್ಕ ಲಭಿಸುತ್ತದೆ. ಪ್ರವಾಸೋದ್ಯಮದ ಬೆಳವಣಿಗೆಗೂ ಉತ್ತೇಜನ ಸಿಗಲಿದೆ’ ಎಂದು ಅವರು ಸಲಹೆ ನೀಡಿದ್ದಾರೆ.

ಸಂಸದರು ಪತ್ರದಲ್ಲಿ ಉಲ್ಲೇಖಿಸಿರುವ ಅಂಶಗಳನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ತುರ್ತಾಗಿ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕಚೇರಿಯಿಂದ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-29-1383829887

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.