‘ರಹಿಮಾನ್ ಕೊಲೆಗೆ ರಾಜ್ಯ ಸರ್ಕಾರವೇ ಕಾರಣ’
‘ಅಬ್ದುಲ್ ರಹಿಮಾನ್ ಅವರ ಕೊಲೆಗೆ ರಾಜ್ಯ ಸರ್ಕಾರವೇ ಹೊಣೆಯಾಗಿದ್ದು ಗೃಹ ಇಲಾಖೆಯ ನಿರ್ಲಕ್ಷ್ಯ ಈ ಕೊಲೆಯಲ್ಲಿ ಎದ್ದು ಕಾಣುತ್ತಿದೆ’ ಎಂದು ಎಸ್‌ಕೆಎಸ್‌ಎಸ್‌ಎಫ್ ರಾಜ್ಯ ಸಮಿತಿ ಪ್ರಧಾನ ಕಾರ್ಯದರ್ಶಿ ಅನೀಸ್ ಕೌಸರಿ ಆರೋಪಿಸಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಜಿಲ್ಲೆಯಲ್ಲಿ ಕಾನೂನಿನ ಭಯವಿಲ್ಲದೆ ದ್ವೇಷ ಭಾಷಣ ಮಾಡಲಾಗುತ್ತಿದೆ. ಸುಹಾಸ್ ಶೆಟ್ಟಿ ಕೊಲೆಯ ನಂತರ ಇದು ತಾರಕಕ್ಕೇರಿದೆ. ಇಂಥ ಕೃತ್ಯ ನಡೆಸುವವರನ್ನು ಬಂಧಿಸಿ ಶಿಕ್ಷೆಗೆ ಗುರಿಯಾಗಿಸಬೇಕು. ಇಲ್ಲದಿದ್ದರೆ ಜಿಲ್ಲೆಯಲ್ಲಿ ಬದುಕು ದುಸ್ತರವಾಗಬಹುದು’ ಎಂದರು.