ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಸುರತ್ಕಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ರೆಹಮತುಲ್ಲಾ ಬಂಧಿತ ಆರೋಪಿ. ದೊಂಬಿ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದ ರೆಹಮತುಲ್ಲಾ 2008 ಡಿಸೆಂಬರ್ 17ರಂದು ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ನಂತರ ವಿಚಾರಣೆಗೆ ಹಾಜರಾಗದ ಕಾರಣ, ನ್ಯಾಯಾಲಯವು ದಸ್ತಗಿರಿ ವಾರೆಂಟ್ ಹೊರಡಿಸಿತ್ತು. 18 ಬಾರಿ ವಾರೆಂಟ್ ಹೊರಡಿಸಿದರೂ ಆತ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಆತನ ಪತ್ತೆಗೆ ನಿರಂತರ ಪ್ರಯತ್ನ ನಡೆಸುತ್ತಿದ್ದ ಎಎಸ್ಐ ರಾಜೇಶ್ ಆಳ್ವ ಮತ್ತು ಸಿಬ್ಬಂದಿ, ಖಚಿತ ಮಾಹಿತಿ ಮೇರೆಗೆ ಕಾಟಿಪಳ್ಳ 2ನೇ ಬ್ಲಾಕ್ನಲ್ಲಿ ಆತನನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-29-1027448475

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.