ಮಂಗಳೂರು: ಮಂಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೃತಕ ಬುದ್ಧಿಮತ್ತೆ (ಎ.ಐ ) ಆಧರಿತ ಸುರಕ್ಷತಾ ವ್ಯವಸ್ಥೆ ರೂಪಿಸಲಾಗುತ್ತದೆ. ಇದಕ್ಕಾಗಿ ₹20 ಕೋಟಿ ವೆಚ್ಚದಲ್ಲಿ ಕ್ಷೇತ್ರದಾದ್ಯಂತ ಅಲ್ಲಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ ಎಂದು ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದರು.

ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯದ ಗಡಿ ಪ್ರದೇಶದಲ್ಲಿ ಹಾಗೂ ನಗರದ ಕೆಲವು ಆಯಕಟ್ಟಿನ ಪ್ರದೇಶಗಳಲ್ಲಿ ಸಾಮಾನ್ಯ ಸಿಸಿಟಿವಿ ಕ್ಯಾಮೆರಾಗಳ ಬದಲು ಹೈ ರೆಸಲ್ಯೂಷನ್ ಸ್ಮಾರ್ಟ್ ಕ್ಯಾಮೆರಾ ಅಳವಡಿಸಲಾಗುತ್ತದೆ. ಇವು ಸೈಬರ್ ಭದ್ರತಾ ವ್ಯವಸ್ಥೆ ಹೊಂದಿರುವ ಕೃತಕ ಬುದ್ಧಿಮತ್ತೆ ಆಧರಿತ ಕ್ಯಾಮೆರಾಗಳು. ಗ್ರಾಮಾಂತರ ಪ್ರದೇಶಗಳಲ್ಲಿ ಸಾಮಾನ್ಯ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುತ್ತದೆ. ಈ ಎಲ್ಲ ಕ್ಯಾಮೆರಾಗಳನ್ನು ಆಯಾ ಪ್ರದೇಶದ ಪೊಲೀಸ್ ಠಾಣೆಗಳಿಗೆ ಹಾಗೂ ಕಮಾಂಡ್ ಸೆಂಟರ್ಗೆ ಜೋಡಿಸಲಾಗುತ್ತದೆ’ ಎಂದು ವಿವರಿಸಿದರು.

‘ಕಮಾಂಡ್ ಸೆಂಟರ್ ನಿರ್ವಹಣೆಗೆ ಕ್ಷೇತ್ರದಲ್ಲಿರುವ ಪ್ರಮುಖ ವೈದ್ಯಕೀಯ ಕಾಲೇಜುಗಳು ಹಾಗೂ ಇನ್ಫೊಸಿಸ್ ನಂತಹ ಖಾಸಗಿ ಸಂಸ್ಥೆಗಳ ನೆರವು ಪಡೆಯಲಿದ್ದೇವೆ. ಹೊರಗುತ್ತಿಗೆ ಆಧಾರದಲ್ಲಿ ಸಿಬ್ಬಂದಿಯನ್ನು ನೇಮಿಸಿಕೊಳ್ಳಲಿದ್ದೇವೆ. ಆದರೆ ಅವು ಸಂಪೂರ್ಣವಾಗಿ ಪೊಲೀಸ್ ಇಲಾಖೆ ಅಧೀನದಲ್ಲೇ ಇರಲಿವೆ’ ಎಂದರು.

‘ಯಾವುದಾದರೂ ಕಡೆ ಹಿಟ್ ಆ್ಯಂಡ್ ರನ್ ಘಟನೆ ನಡೆದರೆ ಆ ಮಾದರಿಯ ವಾಹನ ಯಾವೆಲ್ಲ ಸಿಸಿಟಿವಿ ಕ್ಯಾಮೆರಾಗಳ ವ್ಯಾಪ್ತಿಯಲ್ಲಿ ಹಾದು ಹೋಗಿವೆ ಎಂಬ ಮಾಹಿತಿ ಕೆಲವೇ ಕ್ಷಣಗಳಲ್ಲಿ ಸಿಗಲಿದೆ. ಅಗತ್ಯಬಿದ್ದರೆ ತುರ್ತು ನೆರವು ಪಡೆಯುವುದಕ್ಕೂ ಈ ವ್ಯವಸ್ಥೆಯಿಂದ ಸಾಧ್ಯವಾಗಲಿದೆ’ ಎಂದು ತಿಳಿಸಿದರು.

‘ಸರ್ಕಾರಿ ಆಸ್ಪತ್ರೆಗಳ ಹೊಣೆಯನ್ನು ಖಾಸಗಿ ವೈದ್ಯ ಕಾಲೇಜುಗಳಿಗೆ ವಹಿಸಿದ ಕ್ರಮವನ್ನು ಸಮರ್ಥಿಸಿಕೊಂಡ ಅವರು, ‘ಯಾವುದೇ ವ್ಯವಸ್ಥೆಯಿಂದ ಜನರಿಗೆ ಎಷ್ಟು ಪ್ರಯೋಜನ ಆಗುತ್ತದೆ ಎಂಬು ದಷ್ಟೇ ನಮಗೆ ಮುಖ್ಯ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-29-1721162615

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.