ಮಂಗಳೂರು: 2010ರ ಮೇ 22ರಂದು ಬಜಪೆ ವಿಮಾನ ನಿಲ್ದಾಣ ಸಮೀಪ ನಡೆದ ವಿಮಾನ ಅಪಘಾತದಲ್ಲಿ ಮೃತರಾದವರ ಸ್ಮರಣಾರ್ಥ ಜಿಲ್ಲಾಡಳಿತ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ಶುಕ್ರವಾರ ನಡೆಯಿತು.

ಅಪಘಾತದಲ್ಲಿ ಮರಣ ಹೊಂದಿ ಗುರುತಿಸಲಾಗದ 12 ಮಂದಿಯ ಮೃತದೇಹಗಳನ್ನು ಸಮಾಧಿ ಮಾಡಿದ ಜಾಗದಲ್ಲಿ ವಿಮಾನ ಅಪಘಾತದಲ್ಲಿ ಮಡಿದ 158 ಜನರ ನೆನಪಿಗಾಗಿ ಕೂಳೂರು ಸೇತುವೆಯಿಂದ ತಣ್ಣೀರು ಬಾವಿ ರಸ್ತೆಗೆ ತಿರುಗುವಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗಿದೆ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಅಗಲಿದವರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು. ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಕುಮಾರ್ ಶೆಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-29-298252562

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.