ಮಂಗಳೂರು: ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ನಡೆದ ಉಚ್ಚಿಲ ಮುಳ್ಳುಗುಡ್ಡೆ ನಿವಾಸಿ ಆರಿಫ್ ಹುಸೇನ್ ಅಲಿಯಾಸ್ ಟ್ಯಾಬ್ಲೆಟ್ ಆರಿಫ್ ಕೊಲೆ ಪ್ರಕರಣದ ಮತ್ತೊಬ್ಬ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಬಜಾಲ್ ನಂತೂರು ಶಾಂತಿನಗರದ ಸಿರಿಸೀಮೆ ನರ್ಸರಿ ಹತ್ತಿರದ ನಿವಾಸಿ, ಪಡೀಲ್ ರೈಲು ನಿಲ್ದಾಣ ಹಿಂಭಾಗದ ವಿಜಯನಗರದ ಬಾಡಿಗೆ ಮನೆಯಲ್ಲಿದ್ದ ಮೊಹಮ್ಮದ್ ಇಬ್ರಾಹಿಂ ಸಿನಾನ್ ಯಾನೆ ಚಿನ್ನು (21) ಬಂಧಿತ ಆರೋಪಿ.

2025ರಲ್ಲಿ ಕಂಕನಾಡಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಹಾಗೂ 2024ರಲ್ಲಿ ಮಂಗಳೂರು ಉತ್ತರ ಠಾಣೆ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯು ಆರಿಫ್ ಹುಸೇನ್ ಕೊಲೆ ಪ್ರಕರಣದ ಆರೋಪಿಗಳಿಗೆ ಹಣಕಾಸಿನ ನೆರವು ನೀಡಿರುವುದು ತನಿಖೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಮಾರ್ಚ್ 27ರಂದು ಬೆಳಿಗ್ಗೆ ತೊಕ್ಕೊಟ್ಟು ಫ್ಲೈಓವರ್ ಮೇಲೆ ಬೈಕ್ನಲ್ಲಿ ಸಂಚರಿಸುತ್ತಿದ್ದ ಆರೀಫ್ ಅವರನ್ನು ಕಾರಿನಲ್ಲಿ ಬಂದ ಆರೋಪಿಗಳು ಕೆಳಗೆ ಬೀಳಿಸಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ್ದರು. ಕಾರನ್ನು ಬಂಟ್ವಾಳ ತಾಲ್ಲೂಕು ಬುಡೋಳಿಯಲ್ಲಿ ಬಿಟ್ಟು ಪರಾರಿಯಾಗಿದ್ದರು. ಮೊಹಮ್ಮದ್ ರಿಫಾತ್ ಆಲಿ, ಇಬ್ರಾಹಿಂ ಖಲೀಲ್, ಅಶ್ಫಾಕ್, ಉಮರ್ ಫಾರೂಕ್, ಮೊಹಮ್ಮದ್ ಶಾಕೀರ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ಇರ್ಷಾದ್, ಮಹಮ್ಮದ್ ಹರ್ಷದ್, ಪುಚ್ಚೆ ನಿಶಾಕ್, ಜುನೈದ್ ಹಾಗೂ ಮೊಹಮ್ಮದ್ ಸುಹೇಲ್ ಅವರನ್ನು ಈಗಾಗಲೇ ಬಂಧಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-29-1813290272

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.