ಮಂಗಳೂರು: ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನ ವಿಳಂಬ, ಸೇವಾ ಭದ್ರತೆ ಕೊರತೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ಭಾರತೀಯ ಮಜ್ದೂರು ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ಜಾರಿಯಲ್ಲಿರುವ ‘ಸಮಸ್ತ’ ಡಿಜಿಟಲ್ ಆರೋಗ್ಯ ಮಾಹಿತಿ ವ್ಯವಸ್ಥೆ ಮೂಲಕ ಆಶಾ ಕಾರ್ಯಕರ್ತೆಯರ ಮೇಲೆ ಅತಿಯಾದ ಡಿಜಿಟಲ್ ಕೆಲಸದ ಹೊರೆ ಹೇರಲಾಗುತ್ತಿದೆ. ಮನೆ–ಮನೆ ಭೇಟಿ, ಗರ್ಭಿಣಿಯರ ಆರೈಕೆ ಹಾಗೂ ಆರೋಗ್ಯ ಜಾಗೃತಿ ಕಾರ್ಯಗಳ ಜೊತೆಗೆ ಗಂಟೆಗಟ್ಟಲೆ ಡೇಟಾ ದಾಖಲಿಸುವ ಅನಿವಾರ್ಯತೆ ಉಂಟಾಗಿದೆ. ಇದರಿಂದ ಆರೋಗ್ಯ ಸೇವೆಯ ಗುಣಮಟ್ಟಕ್ಕೂ ಧಕ್ಕೆಯಾಗುತ್ತಿದೆ. ಪ್ರೋತ್ಸಾಹ ಧನ ಹೆಚ್ಚಳ ಹಾಗೂ ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಪರಿಹಾರಕ್ಕಾಗಿ ರಾಜ್ಯ ಮಟ್ಟದ ಸಮಿತಿ ರಚಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಭಾರತೀಯ ಮಜ್ದೂರು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಯು, ಸಂಘದ ರಾಜ್ಯ ಉಪಾಧ್ಯಕ್ಷ ಸತೀಶ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಾಲ ಕೃಷ್ಣ, ಜಿಲ್ಲಾ ಉಪಾಧ್ಯಕ್ಷ ರೋಹಿತಾಶ್ವ, ಆಶಾ ಕಾರ್ಯಕರ್ತೆಯರ ಮಜ್ದೂರು ಸಂಘದ ರಾಜ್ಯ ಕಾರ್ಯದರ್ಶಿ ರೇವತಿ, ಬಂಟ್ವಾಳ ತಾಲ್ಲೂಕು ಅಧ್ಯಕ್ಷೆ ತುಳಸಿ ದೇವರಾಜ್, ಕಾರ್ಯದರ್ಶಿ ಡೀಲಾಕ್ಷಿ, ಕೋಶಾಧಿಕಾರಿ ಸೌಮ್ಯ, ಗೌರವಾಧ್ಯಕ್ಷೆ ಗಿರಿಜಾ ನಾವೂರು, ಪ್ರಮುಖರಾದ ಪ್ರಮೀಳಾ, ಹರಿಣಾಕ್ಷಿ, ಪ್ರಮೀಳಾ ಮಾಣಿ, ಹೇಮಾವತಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-29-44521504

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.