ಮಂಗಳೂರು: ಆಟೋರಿಕ್ಷಾದಲ್ಲಿ ಸ್ಫೋಟ ಭಯೋತ್ಪಾದನೆ ಕೃತ್ಯ -ಡಿಜಿಪಿ ಪ್ರವೀಣ್ ಸೂದ್

ಮಂಗಳೂರು: ನಗರದ ಗರೋಡಿಯಲ್ಲಿ ಶನಿವಾರ ಚಲಿಸುತ್ತಿದ್ದ ರಿಕ್ಷಾದಲ್ಲಿ ಸಂಭವಿಸಿದ ಲಘು ಸ್ಫೋಟವು ಭಯೋತ್ಪಾದನೆ ಕೃತ್ಯ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಖಚಿತಪಡಿಸಿದ್ದಾರೆ.
ಈ ಕುರಿತು ಭಾನುವಾರ ಟ್ವೀಟ್ ಮಾಡಿರುವ ಅವರು, ಈ ಘಟನೆ ಆಕಸ್ಮಿಕ ವಾಗಿ ನಡೆದಿದ್ದಲ್ಲ. ಗಂಭೀರ ಹಾನಿ ಉಂಟು ಮಾಡುವ ಉದ್ದೇಶದಿಂದಲೇ ಈ ಕೃತ್ಯ ನಡೆಸಲಾಗಿದೆ. ರಾಜ್ಯದ ಪೊಲೀಸರು ಕೇಂದ್ರದ ತನಿಖಾ ಏಜೆನ್ಸಿಗಳ ಜೊತೆ ಸೇರಿ ಇದರ ಬಗ್ಗೆ ತನಿಖೆ ನಡೆಸುತ್ತಿವೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ನಗರದ ಗರೋಡಿ ಬಳಿ ಶನಿವಾರ ಸಂಜೆ ಚಲಿಸುತ್ತಿದ್ದ ರಿಕ್ಷಾದಲ್ಲಿ ಲಘು ಸ್ಫೋಟ ಸಂಭವಿಸಿ ದಟ್ಟ ಹೊಗೆ ಕಾಣಿಸಿತ್ತು.
ರಿಕ್ಷಾದಲ್ಲಿದ್ದ ಪ್ರಯಾಣಿಕ ಹಾಗೂ ತಾಲೂಕು ಗಾಯಗೊಂಡು ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಬ್ಬರೂ ಹೆಸರನ್ನು ಪೋಲೀಸರು ಇನ್ನೂ ಬಹಿರಂಗ ಪಡಿಸಿಲ್ಲ.
ರಿಕ್ಷಾದಲ್ಲಿದ್ದ ಕುಕ್ಕರ್ ಸ್ಫೋಟಗೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಆದರೆ ಪೊಲೀಸರು ಇದನ್ನು ಇನ್ನೂ ಖಚಿತಪಡಿಸಿಲ್ಲ.
ಮಂಗಳೂರು ನಗರದ ಗರೋಡಿಯಲ್ಲಿ ಶನಿವಾರ ಚಲಿಸುತ್ತಿದ್ದ ರಿಕ್ಷಾದಲ್ಲಿ ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಪೊಲೀಸರ ತಂಡ ಬೀಡುಬಿಟ್ಟಿದ್ದು, ಭಾನುವಾರ ಸ್ಥಳ ಮಹಜರು ನಡೆಸಿದರು.#Mangaluru #PraveenSood #Terrorism #BlastCase pic.twitter.com/mRC7wQBwXk
— Prajavani (@prajavani) November 20, 2022
ಮಂಗಳೂರು ನಗರದ ಗರೋಡಿಯಲ್ಲಿ ಶನಿವಾರ ಚಲಿಸುತ್ತಿದ್ದ ರಿಕ್ಷಾದಲ್ಲಿ ಸ್ಫೋಟ ಸಂಭವಿಸಿದ ಸ್ಥಳದಲ್ಲಿ ಪೊಲೀಸರ ತಂಡ ಬೀಡುಬಿಟ್ಟಿದ್ದು, ಭಾನುವಾರ ಸ್ಥಳ ಮಹಜರು ನಡೆಸಿದರು.#Mangaluru #PraveenSood #Terrorism #BlastCase pic.twitter.com/jxpPxq9qjp
— Prajavani (@prajavani) November 20, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.