ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕಂಪಾಡಿಯಿಂದ ಎಐಒಸಿಎಲ್ ಜಂಕ್ಷನ್ವರೆಗೆ ಒಟ್ಟು ₹414.16 ಕೋಟಿ ವೆಚ್ಚದಲ್ಲಿ ಎಲಿವೇಟೆಡ್ ಮೇಲ್ಸೇತುವೆ ಮತ್ತು ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಟೆಂಡರ್ ಪ್ರಕ್ರಿಯೆ ಆರಂಭಿಸಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವ ಮಂಗಳೂರು ಬಂದರಿಗೆ ನೇರ ಸಂಪರ್ಕ ಸುಧಾರಿಸುವ ಒಟ್ಟು 3.075 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿ ಯೋಜನೆ ಇದಾಗಿದ್ದು, ಈ ಪೈಕಿ 1.520 ಮೀ. ಉದ್ದದ ಅತ್ಯಾಧುನಿಕ 6 ಪಥದ ಎಲಿವೇಟೆಡ್ ಮೇಲ್ಸೇತುವೆ ನಿರ್ಮಾಣಗೊಳ್ಳಲಿದೆ. ಈ ಯೋಜನೆಯನ್ನು ಇಪಿಸಿ ಮಾದರಿಯಲ್ಲಿ ಅನುಷ್ಠಾನಗೊಳಿಸಲಾಗುತ್ತದೆ. ಹೆದ್ದಾರಿಯ ಇಕ್ಕೆಲಗಳಲ್ಲಿ ಒಟ್ಟು 5.825 ಕಿ.ಮೀ. ಉದ್ದದ ಸರ್ವಿಸ್ ರಸ್ತೆ ನಿರ್ಮಿಸಲಾಗುವುದು. ಈ ಯೋಜನೆಯ ಅನುಷ್ಠಾನಕ್ಕಾಗಿ ನವ ಮಂಗಳೂರು ಬಂದರು ಪ್ರಾಧಿಕಾರವು ಅಗತ್ಯವಿರುವ ಹೆಚ್ಚುವರಿ ಭೂಮಿ ಹಾಗೂ ಆರ್ಥಿಕ ಧನಸಹಾಯವನ್ನು ಹೆದ್ದಾರಿ ಪ್ರಾಧಿಕಾರಕ್ಕೆ ಒದಗಿಸಲಿದೆ. ಬೈಕಂಪಾಡಿ ಕೈಗಾರಿಕಾ ಪ್ರದೇಶ ಮತ್ತು ಕೆಐಒಸಿಎಲ್ ವಲಯದ ರಸ್ತೆ ಅಭಿವೃದ್ಧಿ ಯೋಜನೆಯು ಜಿಲ್ಲೆಯ ಕೈಗಾರಿಕಾ ಮತ್ತು ಆರ್ಥಿಕ ಬೆಳವಣಿಗೆಗೆ ಪ್ರಮುಖ ಪ್ರೇರಕ ಶಕ್ತಿಯಾಗಲಿದೆ ಎಂದಿದ್ದಾರೆ.

ಬೈಕಂಪಾಡಿ ಮತ್ತು ಕೂಳೂರು ಜಂಕ್ಷನ್ ಬಳಿ ಈಗಾಗಲೇ ₹11.63 ಕೋಟಿ ವೆಚ್ಚದ ಅಂಡರ್ಪಾಸ್ ನಿರ್ಮಾಣ ಯೋಜನೆಗೆ ಅನುಮೋದನೆ ದೊರೆತು ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಕಾಮಗಾರಿಗಳಿಂದ ಬಂದರು ವ್ಯಾಪ್ತಿಯ ಹೆದ್ದಾರಿ ವಲಯ ಮೇಲ್ದರ್ಜೆಗೇರಲಿದೆ ಎಂದು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-29-206292075

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.