ಮಂಗಳೂರು: ಬ್ಯಾಂಕ್ನಿಂದ ಸಬ್ಸಿಡಿ ದೊರಕಿಸುವ ಭರವಸೆ ನೀಡಿ ಅನೇಕ ಮಹಿಳೆಯರಿಗೆ ವಂಚಿಸಿದ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪರಿಶಿಷ್ಟ ಸಮುದಾಯಗಳ ಮುಖಂಡರು ಒತ್ತಾಯಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ಆಲಿಸಲು ಪೊಲೀಸ್ ಇಲಾಖೆ ಇಲ್ಲಿ ಶನಿವಾರ ಏರ್ಪಡಿಸಿದ್ದ ಸಭೆಯಲ್ಲಿ ಈ ಕುರಿತು ಪ್ರಸ್ತಾಪಿಸಿದ ಸಮುದಾಯದ ಮುಖಂಡ ಎಸ್.ಪಿ ಆನಂದ, ‘ವ್ಯಕ್ತಿಯೊಬ್ಬ ಬ್ಯಾಂಕ್ ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ, ಪಾಂಡೇಶ್ವರ ಆಸುಪಾಸಿನ ಸುಮಾರು 15ಕ್ಕೂ ಹೆಚ್ಚು ಮಹಿಳೆಯರಿಂದ ತಲಾ ₹ 10ಸಾವಿರದಿಂದ ₹ 20 ಸಾವಿರ ಹಣ ಪಡೆದುಕೊಂಡಿದ್ದ. ಸಂತ್ರಸ್ತ ಮಹಿಳೆ ಯರಿಗೆ ಯಾವುದೇ ಸಬ್ಸಿಡಿ ಸಿಕ್ಕಿಲ್ಲ. ನಿರ್ದಿಷ್ಟ ದಿನದಂದು ಖುದ್ದು ಭೇಟಿಯಾಗಿ ಸಮಸ್ಯ ಇತ್ಯರ್ಥಪಡಿಸುವುದಾಗಿ ಭರವಸೆ ನೀಡಿದ್ದ. ಹೇಳಿದ ದಿನ ಆತ ಸ್ಥಳಕ್ಕೆ ಬರಲೇ ಇಲ್ಲ’ ಎಂದು ಮಾಹಿತಿ ನೀಡಿದರು.

ಆ ವ್ಯಕ್ತಿ ಇದೇ ರೀತಿ ಬೇರೆ ಕಡೆಯೂ ವಂಚನೆ ನಡೆಸಿರುವ ಸಾಧ್ಯತೆ ಇದೆ ಎಂದು ಅವರು ಶಂಕೆ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಪಿ (ಕಾನೂನು ಸುವ್ಯವಸ್ಥೆ) ಮಿಥುನ್ ಎಚ್.ಎನ್, ‘ಸಂಬಂಧಪಟ್ಟ ಪೊಲೀಸ್ ಠಾಣೆಯ ಅಧಿಕಾರಿ ಈ ಬಗ್ಗೆ ತಕ್ಷಣ ಮೊಕದ್ದಮೆ ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು‘ ಎಂದು ನಿರ್ದೇಶನ ನೀಡಿದರು.

ಹಿರಿಯ ಪೌರಕಾರ್ಮಿಕ ದಂಪತಿ ಯನ್ನು ಕಡಿಮೆ ಸಂಬಳಕ್ಕೆ ದುಡಿಸಿಕೊಳ್ಳಲಾಗುತ್ತಿದೆ. ಅವರಿಗೆ ಇಎಸ್ಐ ಹಾಗೂ ಭವಿಷ್ಯ ನಿಧಿ ಸೌಕರ್ಯವನ್ನೂ ನೀಡುತ್ತಿಲ್ಲ ಎಂದು ಸಮುದಾಯದ ಮುಖಂಡ ಅನಿಲ್ ಕುಮಾರ್ ಹಾಗೂ ಆನಂದ ಗಮನ ಸೆಳೆದರು. ಈ ಕುರಿತು ಪ್ರತಿಕ್ರಿಯಿಸಿದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಮಂಗಳೂರು ವಲಯದ ಪೊಲೀಸ್ ವರಿಷ್ಠಾಧಿಕಾರಿ ಸಿ.ಎ.ಸೈಮನ್, ‘ಈ ಕುರಿತ ದಾಖಲೆಗಳನ್ನು ಪರಿಶೀಲಿಸಿ ಕ್ರಮವಹಿಸುತ್ತೇವೆ’ ಎಂದು ಭರವಸೆ ನೀಡಿದರು. ಈ ಬಗ್ಗೆ ಮುಂದಿನ ಕ್ರಮ ವಹಿಸಲು, ಕಚೇರಿಗೆ ಬಂದು ಲಿಖಿತ ದೂರು ನೀಡುವಂತೆ ಸಲಹೆ ನೀಡಿದರು.

ಕುದ್ಕೊರಿಗುಡ್ಡೆಯಲ್ಲಿ ಅಂಬೇಡ್ಕರ್ ಜಯಂತಿಯ ಬ್ಯಾನರ್ ಕಟ್ಟಲು ಅವಕಾಶ ನೀಡದೇ ಕೆಲ ಸಮಾಜ ಘಾತುಕ ವ್ಯಕ್ತಿಗಳು ಸಾರ್ವಜನಿಕವಾಗಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ ಎಂದು ಅನಿಲ್ ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಪಿ ಮಿಥುನ್, ‘ಕಾರ್ಯಕ್ರಮ ನಡೆದ ತಕ್ಷಣವೇ ಸಂಘಟಕರು ಬ್ಯಾನರ್ಗಳನ್ನು ತೆರವುಗೊಳಿಸಬೇಕು. ಬ್ಯಾನರ್ ಅಳವಡಿಕೆಗೆ ಅನುಮತಿ ನೀಡುವಾಗಲೇ ತೆರವಿಗೆ ಸಂಬಂಧಿಸಿದ ಷರತ್ತುಗಳನ್ನು ಹಾಕಿರುತ್ತಾರೆ. ಆ ಷರತ್ತುಗಳನ್ನು ಪಾಲಿಸಬೇಕು‘ ಎಂದು ಸೂಚಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ಸಭೆಯನ್ನು ಠಾಣೆ ಹಂತದಲ್ಲಿ ನಡೆಸುವ ಬದಲು ಸಮುದಾಯದ ಹಂತದಲ್ಲೇ ನಡೆಸಬೇಕು. ಇದರಿಂದ ಹೆಚ್ಚು ಮಂದಿಗೆ ಪ್ರಯೋಜನವಾಗುತ್ತದೆ ಎಂದು ಮುಖಂಡ ಸದಾಶಿವ ಸಲಹೆ ನೀಡಿದರು.

'ಮೃತ ಮಹಿಳೆಯೊಬ್ಬರಿಗೆ ಸೇರಿದ ಹಣವನ್ನು ಉಪ ಗುತ್ತಿಗೆದಾರನೊಬ್ಬ ದುರುಪಯೋಗಪಡಿಸಿಕೊಂಡಿದ್ದು, ಈ ಬಗ್ಗೆ ಕ್ರಮವಹಿಸಬೇಕು ಎಂದು ಸಮು ದಾಯದ ನಾಯಕರು ಒತ್ತಾಯಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-29-1866316509

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.