ಮಂಗಳೂರು: ಬ್ಯಾರಿ ಸಮುದಾಯವರು ವ್ಯವಹಾರ ಚತುರರು. ಅವರು ಉದ್ಯಮ ಕ್ಷೇತ್ರದಲ್ಲಿ ಸದಾ ಮುಂಚೂಣಿಯಲ್ಲಿರುತ್ತಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.

ಬ್ಯಾರಿಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ (ಬಿಸಿಸಿಐ) ವತಿಯಿಂದ ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ದಶಮಾನೋತ್ಸವ ಸಮಾರಂಭದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು.

‘ಬ್ಯಾರಿ ಸಮುದಾಯವು ಎಸ್.ಬಂಗಾರಪ್ಪನವರಿಗೆ ದಕ್ಷಿಣ ಕನ್ನಡದಲ್ಲಿ ರಾಜಕೀಯ ಶಕ್ತಿ ನೀಡಿತ್ತು. ರಾಜ್ಯದ ಕರಾವಳಿ ಭಾಗದಲ್ಲಿ ಅವರಿಗೆ ಬ್ಯಾರಿ ಸಮುದಾಯದಲ್ಲಿ ತುಂಬಾ ಅಭಿಮಾನಿಗಳಿದ್ದರು. ಅವರು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸಮುದಾಯಕ್ಕೆ ಹಾಗೂ ಯೆನೆಪೋಯ ಸಂಸ್ಥೆಗೆ ದಂತ ವೈದ್ಯ ಕಾಲೇಜು ಮಂಜೂರಾತಿ ಪಡೆಯಲು ಅನುವು ಮಾಡಿಕೊಟ್ಟರು. ಯೆನೆಪೋಯ ಸಂಸ್ಥೆ ಇವತ್ತು ದೊಡ್ಡದಾಗಿ ಬೆಳೆದಿದೆ’ ಎಂದರು.

‘ಕಿತ್ತಳೆ ವ್ಯಾಪಾರಿ ಹರೇಕಳ ಹಾಜಬ್ಬ ಅವರು ಊರಿನಲ್ಲಿ ಮುತುವರ್ಜಿ ವಹಿಸಿ ನಿರ್ಮಿಸಿರುವ ಶಾಲೆಗೆ ಸಂಬಂಧಿಸಿ ಯಾವುದೇ ಕೆಲಸ ಕಾರ್ಯಗಳು ಆಗಬೇಕಿದ್ದರೂ, ನೆರವು ನೀಡಲು ಸರ್ಕಾರ ಸಿದ್ಧ’ ಎಂದರು.

ಕಾರ್ಯಕ್ರಮವನ್ನು ಯೆನೆಪೋಯ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ವೈ.ಅಬ್ದುಲ್ಲ ಕುಂಞಿ ಉದ್ಘಾಟಿಸಿದರು.

ತುಂಬೆ ಸಮೂಹ ಸಂಸ್ಥೆಗಳ ಅಧ್ಯಕ್ಷ ತುಂಬೆ ಮೊಯ್ದೀನ್, ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಹರೇಕಳ ಹಾಜಬ್ಬ ಭಾಗವಹಿಸಿದ್ದರು.

ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀಸ್ ಅಧ್ಯಕ್ಷ ಎಸ್.ಎಂ. ರಶೀದ್ ಅಧ್ಯಕ್ಷತೆ ವಹಿಸಿದ್ದರು.

ಯೆನೆಪೋಯ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ವೈ.ಅಬ್ದುಲ್ಲ ಕುಂಞಿ ಅವರಿಗೆ ‘ಬ್ಯಾರಿ ಲೆಜೆಂಡ್’ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬಿಸಿಸಿಐ ಚಿಕ್ಕಮಗಳೂರು ಘಟಕದ ಅಧ್ಯಕ್ಷ ಅಬ್ದುಲ್ಲ ಸತ್ತಾರ್ ಮುಹಮ್ಮದ್ ಇಸ್ಮಾಯಿಲ್, ಎಸ್.ಎಂ.ಅರ್ಶಾದ್ ಮೋತಿಶ್ಯಾಂ, ಮಾಜಿ ಶಾಸಕ ಮೊಹಿಯುದ್ದೀನ್ ಬಾವ, ಹರೇಕಳ ಹಾಜಬ್ಬ, ಬಿಸಿಸಿಐ ಅಂತರ್ರಾಷ್ಟ್ರೀಯ ಘಟಕದ ಅಧ್ಯಕ್ಷ ಹಿದಾಯತ್ ಅಡ್ಡೂರು, ಅಬ್ದುಲ್ಲ ಮೋನು, ಕಾರ್ಯದರ್ಶಿಗಳಾದ ನಿಸಾರ್ ಮುಹಮ್ಮದ್ ಝಾಕೀರ್, ಕಾರ್ಯಕಾರಿ ಸಮಿತಿ ಸದಸ್ಯರಾದ ಯು.ಟಿ. ಇಫ್ತಿಕಾರ್ ಅಲಿ, ರಿಯಾಜ್ ಎ.ಕೆ. ಬಾವ, ಶೌಕತ್ ಶೌರಿ, ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಮುಹಮ್ಮದ್ ಹ್ಯಾರೀಸ್, ಜಿ.ಅಬ್ದುಲ್ ರಝಾಕ್, ಆಸಿಫ್ ಸೂಫಿ ಖಾನ್,ಅಬ್ದುಲ್ ರವೂಫ್ ಸುಲ್ತಾನ್ ಗೋಲ್ಡ್, ಬದ್ರುದ್ದೀನ್ ಪಣಂಬೂರು ಭಾಗವಹಿಸಿದ್ದರು.

ಮಾಹಿತಿ ಪತ್ರ ಮತ್ತು ಸ್ಮರಣ ಸಂಚಿಕೆಯನ್ನು ಗಣ್ಯರು ಬಿಡುಗಡೆಗೊಳಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇಮ್ತಿಯಾಜ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಖಜಾಂಚಿ ಮನ್ಸೂರ್ ಅಹ್ಮದ್ ವಂದಿಸಿದರು. ಸಾಹಿಲ್ ಜಹೀರ್ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-29-253448143

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.