ಮಂಗಳೂರು: ಬೆಂದೂರ್ ಸೇಂಟ್ ಸೆಬಾಸ್ಟಿಯನ್ ಚರ್ಚ್ನ ಕ್ಯಾಥೊಲಿಕ್ ಆ್ಯಕ್ಷನ್ ಲೀಗ್ (ಸಿಎಎಲ್), ಆರೋಗ್ಯ ಆಯೋಗ, ಕುಟುಂಬ ಆಯೋಗ, ಮಂಗಳೂರು ರಕ್ತದಾನಿಗಳ ಸಂಘ ಮತ್ತು ಲಯನ್ಸ್ ಕ್ಲಬ್ ಬಿಜೈ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಮಾ.22ರಂದು ನಡೆಯಲಿದೆ.

ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಸಹಯೋಗದಲ್ಲಿ ಬೆಂದೂರ್ ಶತಮಾನೋತ್ಸವ ಭವನದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಶಿಬಿರ ನಡೆಯಲಿದ್ದು ಸ್ತನ ಕ್ಯಾನ್ಸರ್ ಮತ್ತು ಗರ್ಭಕಂಠದ ಕ್ಯಾನ್ಸರ್ ತಪಾಸಣೆಯ ಜೊತೆಯಲ್ಲಿ ಎಲುಬು ಮತ್ತು ಕೀಲು, ಕಿವಿ, ಮೂಗು, ಗಂಟಲು, ಚರ್ಮರೋಗ, ಸ್ತ್ರೀಯರಿಗೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಸಾಮಾನ್ಯ ತಪಾಸಣೆಗಳು ಇರುತ್ತವೆ.

ರಕ್ತದಾನ ಕಾರ್ಯದಲ್ಲಿ 18ರಿಂದ 55 ವರ್ಷ ವಯಸ್ಸಿನ ಆರೋಗ್ಯವಂತರು ದಾನ ಮಾಡಿ ಜೀವ ಉಳಿಸುವ ಕಾರ್ಯದಲ್ಲಿ ಭಾಗಿಯಾಗಬೇಕು ಎಂದು ಸಂಘಟಕರು ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-29-1143889264

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.