ಮಂಗಳೂರು: ನಗರದ ಬೆಂಗರೆಯ ವೀರ ಭಾರತಿ ರಾಮಾಂಜನೇಯ ಮಂದಿರ ಹಾಗೂ ವೀರ ಭಾರತಿ ವ್ಯಾಯಾಮ ಶಾಲೆಯ ವತಿಯಿಂದ ಶ್ರೀ ಸೀತಾ ರಾಮ ಲಕ್ಷ್ಮಣ ಹನುಮಾನ್ ಸಮೇತ ಪಟ್ಟಾಭಿರಾಮ ದೇವರ ನೂತನ ಬಿಂಬ ಪ್ರತಿಷ್ಠೆ ಹಾಗೂ ಶ್ರೀ ವೀರ ಮಾರುತಿ ದೇವರ ಬಿಂಬ ಪುನಃ ಪ್ರತಿಷ್ಠೆ ಹಾಗೂ ನಾಗಶಿಲಾ ಪುನಃ ಪ್ರತಿಷ್ಠೆ ಅಂಗವಾಗಿ ಏ.17ರಿಂದ 19ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಏ.15ರಂದು ಮಧ್ಯಾಹ್ನ 3 ಗಂಟೆಗೆ ಸೀತಾ ರಾಮ ಲಕ್ಷ್ಮಣ ಹನುಮಾನ್ ಸಮೇತ ಪಟ್ಟಾಭಿರಾಮ ದೇವರ ನೂತನ ಪಂಚಲೋಹ ವಿಗ್ರಹದ ಮೆರವಣಿಗೆ ನಡೆಯಲಿದೆ. 17ರಂದು ಬೆಳಿಗ್ಗೆ 9 ಗಂಟೆಯಿಂದ ಧಾರ್ಮಿಕ ಕಾರ್ಯಕ್ರಮ, ಸಂಜೆ 5ರಿಂದ ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ಪ್ರಾಕಾರ ಬಲಿ, ಬಿಂಬಾಧಿವಾಸ ಹೋಮ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಗೌರವ ಅಧ್ಯಕ್ಷ ಮೋಹನ್ ಬೆಂಗ್ರೆ ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಏ.18ರಂದು ಬೆಳಿಗ್ಗೆ 8 ಗಂಟೆಯಿಂದ ಪಟ್ಟಾಭಿರಾಮ ದೇವರ ಬಿಂಬ ಪ್ರತಿಷ್ಠೆ, ವೀರ ಮಾರುತಿ ದೇವರ ಬಿಂಬ ಪುನಃ ಪ್ರತಿಷ್ಠೆ, ಜೀವಕಲಶಾಭಿಷೇಕ, ಪ್ರಾಣ ಪ್ರತಿಷ್ಠೆ, ಪ್ರತಿಷ್ಠಾ ಕಲಶಾಭಿಷೇಕ, ಪ್ರತಿಷ್ಠಾಂಗ ಕಲಾತತ್ವ ಹೋಮ ಹಾಗೂ ಮಹಾಪೂಜೆ ನೆರವೇರಲಿದೆ. ಬೆಳಿಗ್ಗೆ 10 ಗಂಟೆಗೆ ಸ್ವಾಗತ ಗೋಪುರವನ್ನು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನೆರವೇರಿಸುವರು. 10.30ಕ್ಕೆ ಸಭಾ ಕಾರ್ಯಕ್ರಮ, ಮಧ್ಯಾಹ್ನ 12 ಗಂಟೆಗೆ ಅನ್ನ ಸಂತರ್ಪಣೆ, ಸಂಜೆ 6 ಗಂಟೆಗೆ ಒಡಿಯೂರು ಗುರುದೇವದತ್ತ ಸಂಸ್ಥಾನದ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ, ರಾತ್ರಿ 8.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಏ.19ರಂದು ಬೆಳಿಗ್ಗೆ 9ರಿಂದ ಬ್ರಹ್ಮಕಲಶಾಭಿಷೇಕ ಪ್ರಾರಂಭ, 11ರಿಂದ 12 ಗಂಟೆ ನಡುವಿನ ಮಿಥುನ ಲಗ್ನದಲ್ಲಿ ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ಪಲ್ಲಪೂಜೆ, ಮಧ್ಯಾಹ್ನ ಅನ್ನ ಸಂತರ್ಪಣೆ, ರಾತ್ರಿ 8.30ಕ್ಕೆ ಸಭಾ ಕಾರ್ಯಕ್ರಮ, ಏ. 20ರಂದು ರಾಮಾಂಜನೇಯ ಮಂದಿರ ಮತ್ತು ವೀರ ಭಾರತಿ ವ್ಯಾಯಾಮ ಶಾಲೆಯ ಶತಮಾನೋತ್ಸವ ಸಂಭ್ರಮಾಚರಣೆ, ವೀರ ಮಾರುತಿ ವಿಗ್ರಹದ 57ನೇ ವಾರ್ಷಿಕ ಪ್ರತಿಷ್ಠಾಪನೆ ಹಾಗೂ ಭಜನಾ ಮಂಗಳೋತ್ಸವ ನಡೆಯಲಿದೆ ಎಂದು ವಿವರಿಸಿದರು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಚೇತನ್ ಬೆಂಗ್ರೆ, ಪ್ರಧಾನ ಕಾರ್ಯದರ್ಶಿ ಮೋಹನ್ ಕುಮಾರ್, ಆಡಳಿತ ಮಂಡಳಿ ಅಧ್ಯಕ್ಷ ಆನಂದ್ ಅಮೀನ್, ತುಕಾರಾಮ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-29-516291515

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.