ದಕ್ಷಿಣ ಕನ್ನಡ ಜಿಲ್ಲೆಯಿಂದ ಮಾಜಿ ಸಂಸದ ನಳಿನ್‌ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ, ಉಡುಪಿ ಜಿಲ್ಲೆಯಿಂದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉದಯಕುಮಾರ್ ಶೆಟ್ಟಿ ಪ್ರಬಲ ಆಕಾಂಕ್ಷಿಗಳಾಗಿದ್ದರು. ಬಂಟ ಮತ್ತು ಬಿಲ್ಲವ ಸಮುದಾಯದ ಪ್ರಬಲವಾಗಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಸಮುದಾಯಗಳ ಅಭ್ಯರ್ಥಿಗೆ, ಬಿಜೆಪಿ ಹೈಕಮಾಂಡ್ ಮಣೆ ಹಾಕಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ, ಹಿಂದುಳಿದ ಸವಿತಾ ಸಮಾಜದ (ಒಬಿಸಿ) ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ.