ಮಂಗಳೂರು: ‘ಇಂಧನ ದರ ಏರಿಕೆ, ತೆರಿಗೆ, ವಿಮೆ ಮೊತ್ತ, ಬಿಡಿಭಾಗಗಳ ಬೆಲೆ ಹೆಚ್ಚಳದಿಂದ ಖಾಸಗಿ ಬಸ್ಗಳ ಮಾಲೀಕರು ಹೈರಾಣಾಗಿದ್ದು, ಪ್ರಯಾಣ ದರ ಏರಿಕೆ ಅನಿವಾರ್ಯ. ಆದರೆ, ಸದ್ಯದ ಮಟ್ಟಿಗೆ ಪ್ರಯಾಣದರ ಹೆಚ್ಚಳ ಮಾಡದಿರಲು ತೀರ್ಮಾನಿಸಿದ್ದೇವೆ’ ಎಂದು ದಕ್ಷಿಣ ಕನ್ನಡ ಬಸ್ ಮಾಲೀಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪಾಡಿ ಶನಿವಾರ ಇಲ್ಲಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಸ್ ಪ್ರಯಾಣ ದರ ಪರಿಷ್ಕರಿಸದೆ ಐದು ವರ್ಷಗಳಾಗಿವೆ. ಡೀಸೆಲ್ ಬೆಲೆಯನ್ನು ಒಂದು ತಿಂಗಳು ಅವಲೋಕಿಸಿ, ವೈಜ್ಞಾನಿಕ ಪರಿಶೀಲನೆಯ ನಂತರ ದರ ಏರಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.

ಪ್ರಯಾಣಿಕರು, ವಿದ್ಯಾರ್ಥಿಗಳೊಂದಿಗೆ ಬಸ್ ಚಾಲಕ– ನಿರ್ವಾಹಕರು ವಿನಯದಿಂದ ವರ್ತಿಸುವುದು, ಪ್ರಯಾಣಿಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳುವುದು, ಮಳೆ ಸಂದರ್ಭದಲ್ಲಿ ಜಾಗರೂಕತೆಯಿಂದ ವಾಹನ ಚಲಾಯಿಸಿ ಪ್ರಯಾಣಿಕರನ್ನು ನಿಗದಿತ ಸ್ಥಳಕ್ಕೆ ತಲುಪಿಸುವುದು ಸೇರಿದಂತೆ ಪ್ರಯಾಣಿಕರ ಸುರಕ್ಷತೆ ಬಗ್ಗೆ ಸಂಘದಿಂದ ನಿರ್ದೇಶನ ನೀಡಲಾಗುವುದು ಎಂದರು.

ಕೆಪಿಟಿ ಮತ್ತು ನಂತೂರು ಜಂಕ್ಷನ್ಗಳಲ್ಲಿ ಇನ್ನೂ ಕೆಲವು ಸಮಸ್ಯೆಗಳು ಇದ್ದು, ವಾಹನ ದಟ್ಟಣೆಯಾಗುವ ಕಾರಣ ಬಸ್ಗಳು ವೇಳಾಪಟ್ಟಿಯಂತೆ ಸಂಚರಿಸಲು ಸಮಸ್ಯೆಯಾಗುತ್ತಿದೆ. ಕುಂಟಿಕಾನ ಜಂಕ್ಷನ್, ಪಿವಿಎಸ್, ಬಂಟ್ಸ್ ಹಾಸ್ಟೆಲ್ ಭಾಗದಲ್ಲಿಯೂ ಇದೇ ಸಮಸ್ಯೆ ಇದೆ. ಇದರಿಂದ ಸರಿಯಾದ ಸಮಯಕ್ಕೆ ಪ್ರಯಾಣಿಕರನ್ನು ತಲುಪಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ಸ್ಟೇಟ್ಬ್ಯಾಂಕ್ ಬಸ್ ನಿಲ್ದಾಣದ ಸುತ್ತಮುತ್ತ ಗೂಡಂಗಡಿಗಳ ಸಂಖ್ಯೆ ಹೆಚ್ಚುತ್ತಿದ್ದು, ಸಂಜೆಯ ವೇಳೆಗೆ ಅನೈತಿಕ ವ್ಯವಹಾರಗಳು ನಡೆಯುವ ಆರೋಪವಿದೆ. ಬಸ್ಗೆ ಕಾಯುತ್ತ ನಿಲ್ಲುವ ಮಹಿಳೆಯರನ್ನು ಅನುಮಾನಿಸುವ ಪರಿಸ್ಥಿತಿ ಇದೆ. ಹೀಗಾಗಿ, ಇಲ್ಲಿ ಪೊಲೀಸ್ ಹೊರಠಾಣೆ ಅಳವಡಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಉಪಾಧ್ಯಕ್ಷ ಕೆ.ರಾಮಚಂದ್ರ ನಾಯ್ಕ್, ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್, ಖಜಾಂಚಿ ಜೋಯೆಲ್ ದಿಲ್ರಾಜ್ ಫರ್ನಾಂಡಿಸ್ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-29-600222067

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.