ಮಂಗಳೂರು: ಗೇರು ಕೃಷಿಯ ಬಗ್ಗೆ ತಾಂತ್ರಿಕ ಕಾರ್ಯಾಗಾರ, ಗೇರು ಉತ್ಪನ್ನಗಳ ಸಂಸ್ಕರಣೆ ಮತ್ತು ಮೌಲ್ಯವರ್ಧನೆ, ಗೇರು ಮತ್ತು ಪರಿಸರದ ಕುರಿತು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಗೇರು ಬೆಳೆ ಸಾಧಕರಿಗೆ ಸನ್ಮಾನದೊಂದಿಗೆ ಕರ್ನಾಟಕ ಗೇರು ಮೇಳ ಹಾಗೂ ಕಾರ್ಯಾಗಾರವು ಮೇ 17 ಹಾಗೂ 18ರಂದು ನಗರದ ಕದ್ರಿ ಉದ್ಯಾನದಲ್ಲಿ ನಡೆಯಲಿದೆ.

ಮೇ 17ರಂದು ಕದ್ರಿ ಪಾರ್ಕ್ನ ಜಿಂಕೆ ಉದ್ಯಾನದಲ್ಲಿ ಬೆಳಿಗ್ಗೆ 9 ಗಂಟೆಗೆ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ನಡೆಯಲಿದೆ. ಸ್ಥಳದಲ್ಲಿಯೇ ಹೆಸರು ನೋಂದಾಯಿಸಿಕೊಳ್ಳಬಹುದು. 11 ಗಂಟೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಮೇಳ ಉದ್ಘಾಟಿಸುವರು. ಸ್ಪೀಕರ್ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉಪಸ್ಥಿತರಿರುವರು. ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗೋಡಂಬಿ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ, ಗೋಡಂಬಿ ಸಂಸ್ಕರಣೆ ಮತ್ತು ಮೌಲ್ಯ ವರ್ಧನೆ ಕುರಿತು ಗೋಷ್ಠಿಗಳು ನಡೆಯಲಿವೆ. ಮೇ 18ರ ತಾಂತ್ರಿಕ ಅಧಿವೇಶನದಲ್ಲಿ ಗೋಡಂಬಿ ಕೃಷಿ ‘ಆತ್ಮ ನಿರ್ಭರ್–2035’, ಗೇರು ಬೆಳೆಗೆ ಸಿಗುವ ಪ್ರೋತ್ಸಾಹ, ಯೋಜನೆಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡುವರು. ವಿಜ್ಞಾನಿಗಳು, ಗೇರು ಮತ್ತು ಕೊಕ್ಕೊ ನಿರ್ದೇಶನಾಲಯ, ಗೇರು ಅಭಿವೃದ್ಧಿ ನಿರ್ದೇಶನಾಲಯದ ತಜ್ಞರು ವಿಷಯ ಮಂಡಿಸುವರು ಎಂದರು.

ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ, ಮೇಳಕ್ಕೆ ಭೇಟಿ ನೀಡುವವರಿಗೆ ಉಚಿತವಾಗಿ ಗೇರು ಗಿಡ ವಿತರಣೆ, ಗೇರು ಹಣ್ಣಿನ ಜ್ಯೂಸ್ ವಿತರಣೆ ನಡೆಯಲಿದೆ. ಗೇರು ಕೃಷಿ: ಸವಾಲು ಗಳು ಮತ್ತು ಸಾಧನೆಗಳ ಕುರಿತು 8ರಿಂದ10ನೇ ತರಗತಿ ವಿದ್ಯಾರ್ಥಿಗಳಿಗೆ ಆನ್ಲೈನ್ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದ್ದು, ಮೇ 17ರಂದು ಬಹುಮಾನ ವಿತರಿಸಲಾಗುವುದು ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-126-891195604

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.