ಮಂಗಳೂರು: ಜನಗಣತಿ 2027ರ ಅಂಗವಾಗಿ ಮೊದಲ ಹಂತದ ಮನೆ ಪಟ್ಟಿ, ಮನೆ ಗಣತಿ ಕ್ಷೇತ್ರ ಕಾರ್ಯಾಚರಣೆಯು ಮೇ 15 ರವರೆಗೆ ನಡೆಯಲಿದೆ.

ಈ ನಿಟ್ಟಿನಲ್ಲಿ ಗಣತಿ ಕಾರ್ಯಕ್ಕೆ ನಿಯೋಜಿಸಲಾದ ಗಣತಿದಾರರು ಮನೆ ಮನೆ ಭೇಟಿ ನೀಡಿದಾಗ ನಾಗರಿಕರು ನಿಖರವಾದ ಮಾಹಿತಿಯನ್ನು ನೀಡಿ ಜನಗಣತಿ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ.

‘ಪ್ರಸ್ತುತ ಚಾಲನೆಯಲ್ಲಿರುವ ಮೊದಲ ಹಂತದ ಗಣತಿ ಕಾರ್ಯವು ಮುಕ್ತಾಯ ಹಂತಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಗಣತಿಯಿಂದ ಹೊರಗುಳಿಯದೆ ಈ ಕಾಲಮಿತಿಯೊಳಗೆ ಗಣತಿ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಮತ್ತು ನಿಖರ ಮಾಹಿತಿ ನೀಡಬೇಕು. ಈ ವರೆಗೆ ಗಣತಿದಾರರು ನಿಮ್ಮ ಮನೆಗೆ ಭೇಟಿ ನೀಡದಿದ್ದರೆ ಅಥವಾ ನಿಮ್ಮ ಮನೆಯ ಗಣತಿ ಕಾರ್ಯ ನಡೆಯದಿದ್ದಲ್ಲಿ ಗಣತಿ ಮಾಡಿಸಿಕೊಳ್ಳುವ ಸಲುವಾಗಿ ಪಾಲಿಕೆಯ ಸಹಾಯವಾಣಿ ಸಂಖ್ಯೆ: 0824 –2220332 ಅಥವಾ ವಾಟ್ಸ್ ಆ್ಯಪ್ ಸಂಖ್ಯೆ: 9449007722 ಸಂಪರ್ಕಿಸಬೇಕು‘ ಎಂದು ಪಾಲಿಕೆ ಆಯುಕ್ತರು ಹಾಗೂ ಪ್ರಧಾನ ಜನಗಣತಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-29-1669728904

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.