ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಹೇಳಿಕೆಗಳನ್ನು ಬರೆದುಕೊಂಡಿದ್ದ ಇಬ್ಬರು ಆರೋಪಿಗಳನ್ನು ಕಂಕನಾಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೇರಳದ ಮಂಜೇಶ್ವರದ ಗಣೇಶ್ ಪ್ರಸಾದ್ (41) ಹಾಗೂ ಚಾಮರಾಜನಗರದ ರಾಜೇಂದ್ರ.ಸಿ (48) ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ.

2026 ನೇ ಜನವರಿಯಲ್ಲಿ ನಗರದದಲ್ಲಿ ನಡೆದ ಕಿರಾತ್ (ಕುರಾನ್ ಸ್ಫಟಿಸುವ) ಸ್ಪರ್ದೆಯ ವಿಡಿಯೊ ಪತ್ರಿಕೆಯೊಂದರ ವೆಬ್ಸೈಟ್ನ ಫೇಸ್ ಬುಕ್ ಪುಟದಲ್ಲಿ ಪ್ರಸಾರವಾಗಿತ್ತು. ಅದಕ್ಕೆ ಆರೋಪಿಗಳು ಕೋಮು ಪ್ರಚೋದಕ ಕಮೆಂಟ್ ಹಾಕಿದ್ದರು. ಆರೋಪಿಗಳ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 196ರ ಅಡಿ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66 ಐಟಿ ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು.

ಆರೋಪಿ ಗಣೇಶ್ ಪ್ರಸಾದ್ನನ್ನು ಶುಕ್ರವಾರ ಹಾಗೂ ಆರೋಪಿ ರಾಜೇಂದ್ರನನ್ನು ಶನಿವಾರ ಬಂಧಿಸಲಾಗಿದ್ದು, ಶೀಘ್ರವೇ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು. ಕೃತ್ಯಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-28-1630987706

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.