ಶನಿವಾರ, ಮೇ 21, 2022
23 °C

ಮಂಗಳೂರಿನ ಪಾಲಿಕೆ ಅಧಿಕಾರಿ ಕೆ.ವಿ. ಜಯರಾಮ್ ಮನೆ ಮೇಲೆ ಎಸಿಬಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನಗರ ಯೋಜನೆಗಳ ವಿಭಾಗದ ಜಂಟಿ ನಿರ್ದೇಶಕ ಕೆ.ವಿ. ಜಯರಾಮ್ ಅವರ ಬಿಜೈ ಬಳಿ ಇರುವ ಮನೆ ಮೇಲೆ ಮಂಗಳವಾರ ಬೆಳಿಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ಮುಂದುವರಿದಿದೆ.

ಇದರ ಜೊತೆ ಅವರ ಕಚೇರಿ, ನಗರದ ಪಡೀಲ್ ಬಳಿಯ ಜಯರಾಮ್ ತಂದೆಯ ಮನೆ, ಕೇರಳದಲ್ಲಿರುವ ಜಯರಾಮ್ ಪತ್ನಿಯ ಮನೆ,  ಮೇಲೂ ದಾಳಿ ನಡೆಸಿದ್ದು, ಪರಿಶೀಲಿಸಲಾಗುತ್ತಿದೆ.

ಇದನ್ನೂ ಓದಿ.. ರಾಜ್ಯದಲ್ಲಿ ಏಳು ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ
 

ಕಾರ್ಯಾಚರಣೆಯಲ್ಲಿ ಎಸಿಬಿ ಎಸ್ಪಿ ಬೋಪಯ್ಯ, ಡಿವೈಎಸ್ಪಿ ಕೆ.ಸಿ.ಪ್ರಕಾಶ್‌ ಇನ್ಸ್‌ಪೆಕ್ಟರ್ ಗಳಾದ ಶ್ಯಾಂಸುಂದರ್‌, ಗುರುರಾಜ್‌ ಹಾಗೂ ಸಿಬ್ಬಂದಿ ಇದ್ದಾರೆ.

ಕೆಲಸವೊಂದನ್ನು ಮಾಡಿಕೊಡಲು ಲಂಚ ಬೇಡಿಕೆ ಇಟ್ಟ ಆರೋಪದಲ್ಲಿ ಜಯರಾಮ್ ವಿರುದ್ಧ ಸಂತ್ರಸ್ತರೊಬ್ಬರು  ಎಸಿಬಿಯಲ್ಲಿ ಈ ಹಿಂದೆ ದೂರು ದಾಖಲಿಸಿದ್ದರು. ಆದರೆ, ಈ ಪ್ರಕರಣದ ಬೆನ್ನು ಬಿದ್ದಿದ್ದ ಎಸಿಬಿ ಅಧಿಕಾರಿಗಳಿಗೆ ಇನ್ನೂ ಹೆಚ್ಚಿನ ಮಾಹಿತಿ ಸಿಕ್ಕಿತ್ತು. ಹೀಗಾಗಿ ಟ್ರ್ಯಾಪ್ ಮಾಡುವ ಬದಲು ದಾಳಿಗೆ ಆಯೋಜಿಸಿದ್ದರು.

ದಾಳಿ ವೇಳೆ ಮಹತ್ವದ ದಾಖಲೆಗಳು ದೊರೆತಿವೆ ಎಂದು ಮೂಲಗಳು ತಿಳಿಸಿವೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು