ಮಂಗಳೂರು: ಕೋವಿಡ್ 19 ಸೋಂಕು ತಗುಲಿದ್ದ ಇಲ್ಲಿನ ಉಳ್ಳಾಲ ಕೋಟೆಪುರದ ನಿವಾಸಿ 49 ವರ್ಷದ ಮಹಿಳೆ ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಭಾನುವಾರ ಒಂದೇ ದಿನ ಜಿಲ್ಲೆಯಲ್ಲಿ ಮೂವರು ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರು. ಈಗ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಕೋಟೆಪುರದ ಮಹಿಳೆ ಮಧುಮೇಹ ಮತ್ತು ಪಿತ್ತಕೋಶದಲ್ಲಿನ ಕಲ್ಲಿನ ಸಮಸ್ಯೆಗಳಿಂದ ಬಳಲುತ್ತಿದ್ದರು. ಪಿತ್ತಕೋಶದ ಕಲ್ಲುಗಳನ್ನು ಹೊರತೆಗೆಯಲು ಶಸ್ತ್ರಚಿಕಿತ್ಸೆಗಾಗಿ ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಯ ಮೊದಲು ಅವರ ಗಂಟಲಿನ ದ್ರವದ ಮಾದರಿ ಸಂಗ್ರಹಿಸಿ, ಪರೀಕ್ಷಿಸಿದಾಗ ಸೋಂಕು ಪತ್ತೆಯಾಗಿತ್ತು ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದರು.

ಮೃತ ಮಹಿಳೆಯನ್ನು ಭಾನುವಾರ ಸಂಜೆ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.